Karnataka Weather: ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ ಹಲವೆಡೆ ಮಳೆಯಾದರೂ ಮತ್ತೆ ಸೆಕೆ ಶುರುವಾಗಿದೆ, ಮುಂದಿನ ಎರಡು ದಿನಗಳ ಕಾಲ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.ಬಂಡೀಪುರ, ಕೋಲಾರ, ಎಚ್​ಡಿ ಕೋಟೆ, ಗುಬ್ಬಿ, ಕುಣಿಗಲ್, ಚಿತ್ತಾಪುರ, ನಾಗಮಂಗಲ, ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ಎಂಎಂ ಹಿಲ್ಸ್​, ಭಾಗಮಂಡಲ, ಬೀದರ್​ನಲ್ಲಿ ಮಳೆಯಾಗಿದೆ.

Karnataka Weather: ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: PTI

Updated on: Mar 25, 2025 | 7:23 AM

ಬೆಂಗಳೂರು, ಮಾರ್ಚ್​ 25: ಕರ್ನಾಟಕದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿತ್ತು. ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಸ್ವಲ್ಪ ತಂಪೆನಿಸಿದರೂ ಕಾದ ಭೂಮಿಗೆ ನೀರು ಬಿದ್ದು ಧಗೆ ಎದ್ದಿದೆ. ಮತ್ತೆ ಸೆಕೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, , ಬೀದರ್​ನಲ್ಲಿ ಒಣಹವೆ ಇರಲಿದೆ.

ಬಂಡೀಪುರ, ಕೋಲಾರ, ಎಚ್​ಡಿ ಕೋಟೆ, ಗುಬ್ಬಿ, ಕುಣಿಗಲ್, ಚಿತ್ತಾಪುರ, ನಾಗಮಂಗಲ, ಮೂಡಿಗೆರೆ, ಚಿಕ್ಕಮಗಳೂರು, ಕಡೂರು, ಎಂಎಂ ಹಿಲ್ಸ್​, ಭಾಗಮಂಡಲ, ಬೀದರ್​ನಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮಾರ್ಚ್​ 27,28 ರಂದು ರಾಜ್ಯಾದ್ಯಂತ ಒಣಹವೆ ಇರಲಿದ್ದು, 29ರಿಂದ ಮತ್ತೆ ಮಳೆ ಶುರುವಾಗಲಿದೆ.

ಇದನ್ನೂ ಓದಿ
ಉತ್ತರ ಕರ್ನಾಟಕಕ್ಕೆ ಬಿಸಿಲಾಘಾತ: ರಾಜ್ಯ ವಿಪತ್ತು ಎಂದು ಘೋಷಿಸಲು ಆಗ್ರಹ
ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಒಂದು ವಾರ ಮಳೆ
ಮುಂದಿನ ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕದ ಹಲವೆಡೆ ಭಾರಿ ಮಳೆ: ಮಂಗಳೂರಿನಿಂದ ವಿಮಾನಗಳು ಡೈವರ್ಟ್‌

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಹವಾಮಾನ ಹೇಗಿದೆ? ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಒಣಹವೆ?

ಎಚ್​ಎಎಲ್​ನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us