Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಈ ವಾರಾಂತ್ಯ ಮಳೆ
ಕರ್ನಾಟಕದಲ್ಲಿ ಈ ವಾರಾಂತ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಧಗೆ ಹೆಚ್ಚಾಗಿದ್ದು, ಅದನ್ನು ತಣಿಸಲು ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಮಳೆಯಾಗಬಹುದು ಎಂದು ಹೇಳಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರು, ಮಾರ್ಚ್ 14: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧರ್ಮಸ್ಥಳ, ಪಣಂಬೂರು,ಮಂಗಳೂರು, ಮಾಣಿ, ಸೋಮವಾರಪೇಟೆ, ಪುತ್ತೂರು, ಅಕರಗಲೋಡು, ಬೇಳೂರು, ಕಳಸ, ಚಾಮರಾಜನಗರದಲ್ಲಿ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ.
ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರ ಹಾಗೂ ಬೆಳಗಾವಿ ವಿಮಾನ ನಿಲ್ದಾಣದಲ್ಲಿ 18.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮಾರ್ಚ್ ಮೂರನೇ ವಾರದಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉಷ್ಣವಲಯ ಹಾಗೂ ಪೂರ್ವ ಟ್ರಫ್ನಿಂದ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಮಾರ್ಚ್ 12ರಿಂದ 3 ದಿನಗಳ ಕಾಲ ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆ
ಹವಾಮಾನ ಇಲಾಖೆ ಸೂಚನೆ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳಬೇಡಿ ಬಾಯಾರಿಕೆ ಇಲ್ಲದಿದ್ದರೂ ಸಹ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಕುಡಿಯಿರಿ ಹಗುರವಾದ , ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ ಹೊರಗಡೆ ಹೋಗುವಾಗ ಛತ್ರಿ, ಟೋಪಿ, ಬೂಟುಗಳನ್ನು ಬಳಸಿ ತಲೆತಿರುಗುವಿಕೆ ಅಥವಾ ಅನಾರೋಗ್ಯ ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಭೇಟಿಯಾಗಿ ಒಆರ್ಎಸ್, ಲಸ್ಸಿ, ಅಕ್ಕಿ ನೀರು, ನಿಂಬೆ ನೀರು, ಮಜ್ಜಿಗೆಯನ್ನು ಹೆಚ್ಚು ಕುಡಿಯಿರಿ
ಹೊನ್ನಾವರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 36.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 39.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ