Karnataka Weather: ಬೆಂಗಳೂರಲ್ಲಿ ಮೈಕೊರೆವ ಚಳಿ, ಚಂಡಮಾರುತ ಪ್ರಭಾವ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಕರ್ನಾಟಕದ ಮಲೆನಾಡು ಭಾಗಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮೈಕೊರೆವ ಚಳಿ ಶುರುವಾಗಿದೆ. ಮೋಡಕವಿದ ವಾತಾವರಣವೂ ಇರುವ ಕಾರಣ ಒಂದೆರಡು ದಿನ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

Karnataka Weather: ಬೆಂಗಳೂರಲ್ಲಿ ಮೈಕೊರೆವ ಚಳಿ, ಚಂಡಮಾರುತ ಪ್ರಭಾವ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Nov 28, 2024 | 7:37 AM

ಬೆಂಗಳೂರಲ್ಲಿ ಕಳೆದ ಒಂದು ವಾರದಿಂದ ಮೈಕೊರೆವ ಚಳಿ ಶುರುವಾಗಿದೆ, ಮತ್ತೊಂದೆಡೆ ಚಂಡ ಮಾರುತದ ಪ್ರಭಾವದಿಂದಾಗಿ ಕೆಲವೆಡೆ ಮೋಡಕವಿದ ವಾತಾವರಣವಿದ್ದು, 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಹೊನ್ನಾವರ ಮತ್ತು ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 13.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 24.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ ಮಳೆ

ಬೀದರ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರೊಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಮಿಳುನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ನವೆಂಬರ್ 27 ಬುಧವಾರದಂದು ಚೆನ್ನೈ, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುಗಳಲ್ಲಿನ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯ ಎಚ್ಚರಿಕೆ ನೀಡಿದ ನಂತರ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದಲ್ಲದೇ ಕಡಲೂರು, ಮೈಲಾಡುತುರೈ, ನಾಗಪಟ್ಟಣಂ, ತಂಜಾವೂರು, ತಿರುವರೂರು, ತಿರುವಳ್ಳೂರು, ವಿಲ್ಲುಪುರಂ ಮತ್ತು ಪುದುಚೇರಿ ಮತ್ತು ಕಾರೈಕಲ್ ಕೇಂದ್ರಾಡಳಿತ ಪ್ರದೇಶಗಳ ಶಾಲಾ-ಕಾಲೇಜುಗಳಿಗೆ ಪ್ರತಿಕೂಲ ಹವಾಮಾನದ ಕಾರಣ ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ತಿರುವಳ್ಳೂರು, ಕಡಲೂರು ಮತ್ತು ನಾಗಪಟ್ಟಣಂ ಸೇರಿದಂತೆ ಕಾವೇರಿ ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬುಧವಾರ ಸಾಯಂಕಾಲ ತಮಿಳುನಾಡಿನ ನಾಗಪಟ್ಟಿಣಂನಲ್ಲಿ 127 ಮಿಮೀ ಅತಿ ಹೆಚ್ಚು ಮಳೆ ದಾಖಲಾಗಿದೆ, ಕಡಲೂರು (67 ಮಿಮೀ) ಮತ್ತು ತಂಜಾವೂರಿನ ಅದಿರಾಮ್‌ಪಟ್ಟಿಣಂ (54 ಮಿಮೀ). ಚೆನ್ನೈಯಲ್ಲಿ ಕೂಡ ಸಾಕಷ್ಟು ಮಳೆಯಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ