Karnataka Weather: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​

ಮುಂದಿನ 3 ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜೋರು ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್​
ಮಳೆ
Image Credit source: Getty Images

Updated on: Mar 31, 2025 | 7:25 AM

ಬೆಂಗಳೂರು, ಮಾರ್ಚ್​ 31: ಬೆಂಗಳೂರು(Bengaluru) ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಏಪ್ರಿಲ್​ 3ರಿಂದ ಮಳೆ ಶುರುವಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಬಹುದು. ಧಾರವಾಡ, ಕೊಪ್ಪದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 15.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಒಡಿಶಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಏಪ್ರಿಲ್ 1ರಂದು ದಕ್ಷಿಣ ಕನ್ನಡ, ಬೆಳಗಾವಿ ಮತ್ತು ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 3ರಂದು ಗುಡುಗು ಸಹಿತ ಮಳೆಯಾಗಲಿದೆ. ಏಪ್ರಿಲ್ 4ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್​ 3ರವರೆಗೂ ಮಳೆ

ಎಚ್​ಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 38.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us