AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ

ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಣಹವೆ ಇತ್ತು, ಚಂಡಮಾರುತ ಪರಿಚಲನೆಯಿಂದಾಗಿ ಕರಾವಳಿ ರಾಜ್ಯಗಳಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ
ಮಳೆ Image Credit source: PTI
ನಯನಾ ರಾಜೀವ್
|

Updated on: Nov 08, 2024 | 7:43 AM

Share

ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಇಂದು ಒಣಹವೆ ಇರಲಿದ್ದು, ನವೆಂಬರ್ 9ರಂದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 20.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಚಂಡಮಾರುತ ಭೀತಿ, ಮುಂದಿನ 3 ದಿನಗಳಲ್ಲಿ ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಭಾರಿ ಮಳೆ

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯನಗರದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ