AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್​

ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಲೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಇಂದಿನಿಂದ ಜೋರು ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: PTI
ನಯನಾ ರಾಜೀವ್
|

Updated on: Nov 14, 2024 | 7:37 AM

Share

ಕರ್ನಾಟಕದ ಆರು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ವಿಜಯನಗರದಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ.

ಎಂ.ಎಂ ಹಿಲ್ಸ್​, ಚಾಮರಾಜನಗರದಲ್ಲಿ ಮಳೆಯಾಗಿದೆ, ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 17.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಎಚ್​ಎಎಲ್​ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ