Karnataka Rains: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಧಿಕ ಮಳೆಯಾಗುವ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚುರುಕಾಗುತ್ತಿದ್ದು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಆರಂಭವಾದ ಬಳಿಕ ಅಲ್ಲಲ್ಲಿ ಮಳೆಯಾಗಿದ್ದರೂ ಕೂಡ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿಲ್ಲ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗುವ ನಿರೀಕ್ಷೆ ಇದೆ.

Karnataka Rains: ಕರ್ನಾಟಕದ ಈ 8 ಜಿಲ್ಲೆಗಳಲ್ಲಿ ಮುಂದಿನ 4 ದಿನ ಅಧಿಕ ಮಳೆಯಾಗುವ ಸಾಧ್ಯತೆ
ಮಳೆImage Credit source: Hindustan Times
Follow us
|

Updated on: Jun 26, 2024 | 7:52 AM

ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರಿ ಮಳೆ(Rain)ಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಉಡುಪಿ, ಮಾಣಿ, ಧರ್ಮಸ್ಥಳ, ಮಂಕಿ, ಶಿರಾಲಿ, ಗೇರುಸೊಪ್ಪ, ಪಣಂಬೂರು, ಸಿದ್ದಾಪುರ, ಕುಮಟಾ, ಸುಳ್ಯ, ಮಂಗಳೂರು, ಉಪ್ಪಿನಂಗಡಿ, ಕೊಪ್ಪ, ಕೊಟ್ಟಿಗೆಹಾರ, ಕಾರವಾರ, ಕಾರ್ಕಳ, ಪುತ್ತೂರು, ಭಾಗಮಂಡಲ, ಕದ್ರಾ, ಮುಲ್ಕಿ, ಯಲ್ಲಾಪುರ, ಕೋಟ, ಹುಂಚದಕಟ್ಟೆ, ಬೆಳ್ತಂಗಡಿ, ಕಳಸ, ಶೃಂಗೇರಿ, ಎನ್​ಆರ್​ಪುರ, ಸೋಮವಾರಪೇಟೆ, ಕಮ್ಮರಡಿ, ತಾಳಗುಪ್ಪ, ಜಯಪುರ, ಬಾಳೆಹೊನ್ನೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rains: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೂರು ದಿನ ಮಳೆ

ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 30.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಲಬುರಗಿಯಲ್ಲಿ 33.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 26.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!