AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಹೆಚ್ಚಳ, ಡಿ.24 ರಂದು 6 ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ಗರಿಷ್ಠ ತಾಪಮಾನವೂ ಹೆಚ್ಚಿದೆ. ಡಿಸೆಂಬರ್ ಮುಗಿಯುತ್ತಾ ಬಂದಿದ್ದು, ಜನವರಿ ಆರಂಭಕ್ಕೆ 10 ದಿನಗಳು ಬಾಕಿ ಉಳಿದಿವೆ. ಈಗಲೇ ಗರಿಷ್ಠ ಉಷ್ಣಾಂಶ ಏರಿಕೆಯಾದರೆ ಜನವರಿ ಆರಂಭದಿಂದಲೇ ಬೇಸಿಗೆಯ ಸೆಕೆ ಶುರುವಾಗಬಹುದು ಎನ್ನುವ ಅನುಮಾನವೂ ಮೂಡಿದೆ.ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಹೆಚ್ಚಳ, ಡಿ.24 ರಂದು 6 ಜಿಲ್ಲೆಗಳಲ್ಲಿ ಮಳೆ
Image Credit source: PTI
ನಯನಾ ರಾಜೀವ್
|

Updated on:Dec 20, 2024 | 7:40 AM

Share

ಈ ಬಾರಿ ಚಳಿಗಾಲವೆಂದೆನಿಸುವ ಯಾವ ಲಕ್ಷಣಗಳೂ ಕರ್ನಾಟಕದಲ್ಲಿ ಗೋಚರಿಸುತ್ತಿಲ್ಲ, ಒಂದೆರಡು ದಿನಗಳ ಹಿಂದೆ ಚಳಿ ಸ್ವಲ್ಪ ಹೆಚ್ಚಾಗಿತ್ತು, ಕೇವಲ ಎರಡೇ ದಿನಗಳಲ್ಲಿ ಚಳಿಗಾಲ ಮುಗಿದ ಅನುಭವವಾಗುತ್ತಿದೆ. ವಾತಾವರಣ ತಂಪೆನಿಸಿದರೂ ಗರಿಷ್ಠ ಉಷ್ಣಾಂಶವೂ ಏರ ತೊಡಗಿದೆ. ಈ ಬಾರಿ ಮಳೆಗಾಲ, ಬೇಸಿಗೆ ಕಾಲ ಎರಡೇ ಇರುವಂತೆ ಗೋಚರಿಸುತ್ತಿದೆ. ಡಿಸೆಂಬರ್ ಮುಗಿಯುತ್ತಾ ಬಂದಿದ್ದು, ಜನವರಿ ಆರಂಭಕ್ಕೆ 10 ದಿನಗಳು ಬಾಕಿ ಉಳಿದಿವೆ. ಈಗಲೇ ಗರಿಷ್ಠ ಉಷ್ಣಾಂಶ ಏರಿಕೆಯಾದರೆ ಜನವರಿ ಆರಂಭದಿಂದಲೇ ಬೇಸಿಗೆಯ ಸೆಕೆ ಶುರುವಾಗಬಹುದು ಎನ್ನುವ ಅನುಮಾನವೂ ಮೂಡಿದೆ.

ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.

ಮತ್ತಷ್ಟು ಓದಿ: Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಬೀದರ್​ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 25.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:39 am, Fri, 20 December 24

Follow Us
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ಟೀಂ ಇಂಡಿಯಾ ಆಟಗಾರರು
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ
ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ