ಈ ಬಾರಿ ಚಳಿಗಾಲವೆಂದೆನಿಸುವ ಯಾವ ಲಕ್ಷಣಗಳೂ ಕರ್ನಾಟಕದಲ್ಲಿ ಗೋಚರಿಸುತ್ತಿಲ್ಲ, ಒಂದೆರಡು ದಿನಗಳ ಹಿಂದೆ ಚಳಿ ಸ್ವಲ್ಪ ಹೆಚ್ಚಾಗಿತ್ತು, ಕೇವಲ ಎರಡೇ ದಿನಗಳಲ್ಲಿ ಚಳಿಗಾಲ ಮುಗಿದ ಅನುಭವವಾಗುತ್ತಿದೆ. ವಾತಾವರಣ ತಂಪೆನಿಸಿದರೂ ಗರಿಷ್ಠ ಉಷ್ಣಾಂಶವೂ ಏರ ತೊಡಗಿದೆ. ಈ ಬಾರಿ ಮಳೆಗಾಲ, ಬೇಸಿಗೆ ಕಾಲ ಎರಡೇ ಇರುವಂತೆ ಗೋಚರಿಸುತ್ತಿದೆ. ಡಿಸೆಂಬರ್ ಮುಗಿಯುತ್ತಾ ಬಂದಿದ್ದು, ಜನವರಿ ಆರಂಭಕ್ಕೆ 10 ದಿನಗಳು ಬಾಕಿ ಉಳಿದಿವೆ. ಈಗಲೇ ಗರಿಷ್ಠ ಉಷ್ಣಾಂಶ ಏರಿಕೆಯಾದರೆ ಜನವರಿ ಆರಂಭದಿಂದಲೇ ಬೇಸಿಗೆಯ ಸೆಕೆ ಶುರುವಾಗಬಹುದು ಎನ್ನುವ ಅನುಮಾನವೂ ಮೂಡಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ.
ಮತ್ತಷ್ಟು ಓದಿ: Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಬೀದರ್ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.3ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ31.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:39 am, Fri, 20 December 24