AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​

ಈ ವರ್ಷ ಬೇಸಿಗೆಯಲ್ಲಿ ಬಿಸಿಲ ಝಳ ಹೆಚ್ಚಿದ್ದಂತೆ ಮಳೆಯೂ ಕೂಡ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​
ಮಳೆImage Credit source: PTI
Follow us
ನಯನಾ ರಾಜೀವ್
|

Updated on: Sep 27, 2024 | 7:46 AM

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.

ಅಡಕಿ, ಮಂಠಾಳ, ಚಿತ್ತಾಪುರ, ಕ್ಯಾಸಲ್​ರಾಕ್, ಗೇರುಸೊಪ್ಪ, ಸಿದ್ದಾಪುರ, ಸೇಡಂ, ಕಲಬುರಗಿ, ಕಾರವಾರ, ಸುಳ್ಯ, ಪುತ್ತೂರು, ಶಿರಾಲಿ, ಸಿದ್ದಾಪುರ, ಅಂಕೋಲಾ, ಕುಂದಾಪುರ, ಮಂಕಿ, ಧರ್ಮಸ್ಥಳ, ಜೇವರ್ಗಿ, ಭಾಗಮಂಡಲ, ಕೋಟ, ಕಾರ್ಕಳದಲ್ಲಿ ಮಳೆಯಾಗಿದೆ.

ಬೆಳ್ತಂಗಡಿ, ಉಡುಪಿ, ಉಡುಪಿ, ಪಣಂಬೂರು, ಹೊನ್ನಾವರ, ಕದ್ರಾ, ಕುಮಟಾ, ಬನವಾಸಿ, ಬೆಳಗಾವಿ, ಕುಡತಿನಿ, ಲಿಂಗನಮಕ್ಕಿ, ವಿಜಯನಗರ, ದಾವಣಗೆರೆ, ಹಿರಿಯೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45ಕಿ.ಮೀಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಹೊನ್ನಾವರದಲ್ಲಿ 28.0ಡಿಗ್ರಿ ಸೆಲ್ಸಿಯಸ್​ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.7 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಣಂಬೂರಿನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ