Karnataka Rains: ಕರ್ನಾಟಕದ ಕರಾವಳಿಯಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​

ಈ ವರ್ಷ ಬೇಸಿಗೆಯಲ್ಲಿ ಬಿಸಿಲ ಝಳ ಹೆಚ್ಚಿದ್ದಂತೆ ಮಳೆಯೂ ಕೂಡ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿಯಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್​
ಮಳೆ
Image Credit source: PTI

Updated on: Sep 27, 2024 | 7:46 AM

ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.

ಅಡಕಿ, ಮಂಠಾಳ, ಚಿತ್ತಾಪುರ, ಕ್ಯಾಸಲ್​ರಾಕ್, ಗೇರುಸೊಪ್ಪ, ಸಿದ್ದಾಪುರ, ಸೇಡಂ, ಕಲಬುರಗಿ, ಕಾರವಾರ, ಸುಳ್ಯ, ಪುತ್ತೂರು, ಶಿರಾಲಿ, ಸಿದ್ದಾಪುರ, ಅಂಕೋಲಾ, ಕುಂದಾಪುರ, ಮಂಕಿ, ಧರ್ಮಸ್ಥಳ, ಜೇವರ್ಗಿ, ಭಾಗಮಂಡಲ, ಕೋಟ, ಕಾರ್ಕಳದಲ್ಲಿ ಮಳೆಯಾಗಿದೆ.

ಬೆಳ್ತಂಗಡಿ, ಉಡುಪಿ, ಉಡುಪಿ, ಪಣಂಬೂರು, ಹೊನ್ನಾವರ, ಕದ್ರಾ, ಕುಮಟಾ, ಬನವಾಸಿ, ಬೆಳಗಾವಿ, ಕುಡತಿನಿ, ಲಿಂಗನಮಕ್ಕಿ, ವಿಜಯನಗರ, ದಾವಣಗೆರೆ, ಹಿರಿಯೂರಿನಲ್ಲಿ ಮಳೆಯಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.1ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ

ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45ಕಿ.ಮೀಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಹೊನ್ನಾವರದಲ್ಲಿ 28.0ಡಿಗ್ರಿ ಸೆಲ್ಸಿಯಸ್​ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.7 ಡಿಗ್ರಿ ಸೆಲ್ಇಸಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 30.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಣಂಬೂರಿನಲ್ಲಿ 30.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 26.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us