Karnataka Weather: ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದ್ದು, ಗರಿಷ್ಠ ತಾಪಮಾನ ವಿಪರೀತ ಹೆಚ್ಚಾಗುತ್ತಿದೆ. ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಬಾಗಲಕೋಟೆಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು
ಬೇಸಿಗೆ
Image Credit source: People

Updated on: Mar 04, 2024 | 8:01 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಬೇಸಿಗೆಯು ಸರಿಯಾಗಿ ಆರಂಭವಾಗಿಲ್ಲ ಆಗದೇ ಹಲವು ಭಾಗಗಳಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಈ ಬಾರಿ ಕಡು ಬೇಸಿಗೆಯಲ್ಲಿ ಕುಡಿಯಲು ನೀರು ಇಲ್ಲದ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ. ಬಾಗಲಕೋಟೆಯಲ್ಲಿ 38.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 16.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿ ಹಾಗೂ ಉತ್ತರ ಒಳನಾಡಿನ ಸಾಕಷ್ಟು ಭಾಗಗಳಲ್ಲಿ ಗರಿಷ್ಠ ತಾಪಮಾನ 2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗ್ಗೆ ಮೋಡಕವಿದ ವಾತಾವರಣವಿದ್ದರೂ ಮಧ್ಯಾಹ್ನದ ಬಳಿಕ ಬಿಸಿಲ ಝಳ ಹೆಚ್ಚಲಿದೆ.
ಎಚ್​ಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.1 0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕಲಬುರ್ಗಿಯಲ್ಲಿ ಅತ್ಯಂತ ಗರಿಷ್ಠ ಉಷ್ಣಾಂಶ, ಮಂಡ್ಯದಲ್ಲಿ ಅತ್ಯಂತ ಕನಿಷ್ಠ ತಾಪಮಾನ ದಾಖಲು

18.2ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 35.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us