Karnataka Weather: ಇಬ್ಬನಿ, ಚಳಿ ಶುರು, ಕರ್ನಾಟಕದ ಬಹುತೇಕ ಕಡೆ ಒಣಹವೆ, 12 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕದ ಕೆಲವೇ ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ. ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್​ಎಎಲ್​, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.

Karnataka Weather: ಇಬ್ಬನಿ, ಚಳಿ ಶುರು, ಕರ್ನಾಟಕದ ಬಹುತೇಕ ಕಡೆ ಒಣಹವೆ, 12 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಮಳೆ
Image Credit source: PTI

Updated on: Nov 08, 2025 | 7:17 AM

ಬೆಂಗಳೂರು, ನವೆಂಬರ್ 08: ಕರ್ನಾಟಕದಾದ್ಯಂತ ಮಳೆ(Rain)ಯ ಪ್ರಮಾಣ ಕಡಿಮೆಯಾಗಿದೆ. ಇಬ್ಬನಿ ಬೀಳುತ್ತಿದೆ. ಕೆಲವೇ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ಕಡೆ ಒಣಹವೆ ಇರಲಿದೆ. ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾವೇರಿ, ಗದಗ, ಧಾರವಾಡದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರದಲ್ಲಿ ಒಣಹವೆ ಇರಲಿದೆ.
ಗದಗ, ರಾಯಲ್ಪಾಡು, ಅಣ್ಣಿಗೆರೆ, ಬೈಲಹೊಂಗಲ, ಬೆಂಗಳೂರು ಎಚ್​ಎಎಲ್​, ಕೋಲಾರ, ಕುರ್ಡಿ, ಕುಷ್ಟಗಿ, ಮಧುಗಿರಿ, ರಾಯಚೂರಿನಲ್ಲಿ ಮಳೆಯಾಗಿದೆ.

ಬೆಳಗಾವಿ ಏರ್​ಪೋರ್ಟ್​​ನಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 28.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ಜಿಕೆವಿಕೆಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 18.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ, ಉಳಿದೆಡೆ ಒಣಹವೆ

ಬೆಳಗಾವಿ ಏರ್​ಪೋರ್ಟ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us