AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಮಾರ್ಚ್​ 22ರಿಂದ 3 ದಿನಗಳ ಕಾಲ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದ 12ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಮಾರ್ಚ್​ 22ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಚಾಮರಾಜನಗರ, ಕೋಲಾರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ.

Karnataka Weather: ಮಾರ್ಚ್​ 22ರಿಂದ 3 ದಿನಗಳ ಕಾಲ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ
ಮಳೆImage Credit source: Quint
Follow us
ನಯನಾ ರಾಜೀವ್
|

Updated on: Mar 17, 2024 | 8:04 AM

ಕರ್ನಾಟಕದೆಲ್ಲೆಡೆ ಸೆಕೆ ವಿಪರೀತ ಹೆಚ್ಚಾಗುತ್ತಿದೆ. ಮಾರ್ಚ್​ 22ರಿಂದ ಮೂರು ದಿನಗಳ ಕಾಲ ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗೊಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ಬೆಂಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Weather: ಕೊಡಗಿನಲ್ಲಿ ತಂಪೆರೆದ ಮಳೆ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್​ಎಎಲ್​ನಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ನೀರು ಕುಡಿಯಲು ಬಂದ ಜಿಂಕೆಯನ್ನು ಬೇಟೆಯಾಡಿದ ಹುಲಿ: ವಿಡಿಯೋ ನೋಡಿ
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ತುಮಕೂರು ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಟ ಯುವರಾಜ್ ಕುಮಾರ್
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್