Karnataka Weather: ಬೆಂಗಳೂರಿಗೆ ಯೆಲ್ಲೋ ಅಲರ್ಟ್​, ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ

ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರವೂ ಕೂಡ ಬೆಂಗಳೂರಿನಾದ್ಯಂತ ಮಳೆಯಾಗಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Weather: ಬೆಂಗಳೂರಿಗೆ ಯೆಲ್ಲೋ ಅಲರ್ಟ್​, ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ
ಮಳೆ
Image Credit source: PTI

Updated on: Oct 09, 2025 | 7:18 AM

ಬೆಂಗಳೂರು, ಅಕ್ಟೋಬರ್ 09: ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾರಿ ಮಳೆ(Rain)ಯಾಗುವ ಮುನ್ಸೂಚನೆ ಗೋಚರಿಸುತ್ತಿದೆ, ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್​ ಘೋಷಿಸಿದೆ. ಬುಧವಾರವೂ ಕೂಡ ನಗರಾದ್ಯಂತ ಮಳೆಯಾಗಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಎಂಎಂ ಹಿಲ್ಸ್​, ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಅ.9ರಿಂದ ಭಾರಿ ಮಳೆ

ಬೆಳಗಾವಿ ಏರ್​ಪೋರ್ಟ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 29.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.7ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us