AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಇಂದು ಕೂಡ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದಾದ್ಯಂತ ಹವಾಮಾನ ಹೇಗಿರಲಿದೆ?

ಕರ್ನಾಟಕದ ವಿವಿಧೆಡೆ ಇಂದು ವರುಣನ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ., ಚಂಡಮಾರುತವು ಕರ್ನಾಟಕದ ಮೇಲೆ ಸಣ್ಣ ಪ್ರಮಾಣದ ಪರಿಣಾಮವನ್ನು ಬೀರುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್​, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

Karnataka Weather: ಇಂದು ಕೂಡ ಬೆಂಗಳೂರಿನಲ್ಲಿ ಮಳೆ, ಕರ್ನಾಟಕದಾದ್ಯಂತ ಹವಾಮಾನ ಹೇಗಿರಲಿದೆ?
ಮಳೆ Image Credit source: PTI
ನಯನಾ ರಾಜೀವ್
|

Updated on: Apr 16, 2025 | 7:17 AM

Share

ಬೆಂಗಳೂರು, ಏಪ್ರಿಲ್ 16: ಇಂದು ಕೂಡ ಬೆಂಗಳೂರಿನಲ್ಲಿ ಮಳೆ(Rain)ಯಾಗುವ ಸಂಭವವಿದ್ದು, ರಾಜ್ಯದ ಕೆಲವೆಡೆ ಒಣಹವೆ ಇದ್ದರೆ ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್​, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಬೆಂಗಳೂರು ನಗರ, ಹಿರೆಕೆರೂರು, ಕುಶಾಲನಗರ, ಹಾರಂಗಿ, ಭಾಗಮಂಡಲ, ನಾಪೋಕ್ಲು, ಎಂಎಂ ಹಿಲ್ಸ್​, ಶೃಂಗೇರಿ, ಬಂಡೀಪುರ, ಕೆಆರ್ ನಗರ, ಹೆಸರಘಟ್ಟ, ಕಳಸ, ಬೇಗೂರು, ಆಗುಂಬೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮಂಗಳವಾರ ರಾತ್ರಿ ಮಳೆಯಾಗಿದೆ, ಇಂದು ಕೂಡ ಮೋಡಕವಿದ ವಾತಾವರಣ ಮುಂದುವರೆಯಲಿದೆ. ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
Image
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
Image
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
Image
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
Image
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 38.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ