ಕರ್ನಾಟಕ ಹವಾಮಾನ: ವಾಯುಭಾರ ಕುಸಿತ, ಬೆಂಗಳೂರು, ಕರಾವಳಿಗೆ ಮುಂದಿನ 3 ದಿನ ಮಳೆ ಸಾಧ್ಯತೆ
Karnataka Weather:ದಿಟ್ವಾ ಚಂಡಮಾರುತದ ಪ್ರಭಾವದಿಂದ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕದಾದ್ಯಂತ ಮಳೆ ಆಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೆಲವು ಪ್ರದೇಶಗಳಲ್ಲಿ ಮಂಜು ಹಾಗೂ ಚಳಿ ಹೆಚ್ಚಾಗುವ ಮುನ್ಸೂಚನೆಯಿದೆ.

ಬೆಂಗಳೂರು, ಡ.4: ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತಕ್ಕೆ ಕಾರಣವಾಗಿದೆ, ಬೆಂಗಳೂರು ಮತ್ತು ಕರ್ನಾಟಕದ ಹಲವಾರು ಕರಾವಳಿ ಜಿಲ್ಲೆಗಳು (Karnataka weather alert) ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬುಧವಾರದಂದು (ಡಿ.3) ಬೆಂಗಳೂರಿನ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ನೀಡಿದೆ. ಇನ್ನು ಜಿಲ್ಲೆಯ ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಇರಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26°C ಮತ್ತು ಕನಿಷ್ಠ ತಾಪಮಾನ 18°C ಇರುವ ಸಾಧ್ಯತೆಯಿದೆ. ಡಿಸೆಂಬರ್ 05 ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ (ಚಾಮರಾಜನಗರ, ಮೈಸೂರು, ಕೊಡಗು) ಪ್ರತ್ಯೇಕ ಸ್ಥಳಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹೇಳಿದೆ.
ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು, ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವ ಮಂಜು ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ. ಡಿಸೆಂಬರ್ 6, 8 ರಂದು ರಾಜ್ಯದಾದ್ಯಂತ (ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು) ಒಣ ಹವಾಮಾನ ಇರಲಿದೆ ಎಂದು ಇಲಾಖೆ ತಿಳಿಸಿದೆ.
ಮುಂದಿನ ಮೂರು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್:
ಉತ್ತರ ಕನ್ನಡ, ಬಳ್ಳಾರಿ, ದಾವಣಗೆರ, ಶಿವಮೊಗ್, ಉಡುಪ, ಚಿಕ್ಕಮಗಳೂರ, ದಕ್ಷಿಣ ಕನ್ನ, ಕೊಡಗು, ಮೈಸೂರ, ಚಾಮರಾಜನಗ, ರಾಮನಗರ, ಬೆಂಗಳೂರು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅಲರ್ಟ್ ಮಾಡಲಾಗಿದೆ.
ಇದನ್ನೂ ಓದಿ: 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ; ಬೆಂಗಳೂರಲ್ಲಿ ಬೆಳಿಗ್ಗೆ ಚಳಿ ವಾತಾವರಣ
ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಗಳಲ್ಲಿ ಉಂಟಾಗಿರುವ ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತದಿಂದ ನಿಧಾನವಾಗಿ ದಕ್ಷಿಣ-ನೈಋತ್ಯ ದಿಕ್ಕಿಗೆ ಚಲಿಸುತ್ತಿದೆ. ಹಾಗಾಗಿ ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಇನ್ನು ನಗರದಲ್ಲಿ ಚಳಿ ಪ್ರಮಾಣ ಕೂಡ ಹೆಚ್ಚಿದೆ. ಇದರ ಮಟ್ಟ ಶೇಕಡಾ 94ಕ್ಕೆ ತಲುಪಲಿದೆ. ಈ ವಾರ ನಗರದಲ್ಲಿ ಸೌಮ್ಯ ಮತ್ತು ಮಂಜು ಕವಿದ ವಾತಾವರಣವಿರಲಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ. ಡಿಸೆಂಬರ್ 2 ರಿಂದ 8 ರವರೆಗೆ ತಾಪಮಾನವು ಸ್ವಲ್ಪಮಟ್ಟಿಗೆ ಸ್ಥಿರವಾಗಿರುತ್ತದೆ ಎಂದು ಐಎಂಡಿ ಮುನ್ಸೂಚನೆ ತಿಳಿಸಿದೆ.ಕಳೆದ 15 ದಿನಗಳಲ್ಲಿ, ನಗರದಲ್ಲಿ ತಾಪಮಾನದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದೆ ಎಂದು ವರದಿಯಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:09 am, Thu, 4 December 25




