Karnataka Weather: ಕರ್ನಾಟಕದಾದ್ಯಂತ ಕಡಿಮೆಯಾದ ಮಳೆಯ ಅಬ್ಬರ, ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ

ಬೆಂಗಳೂರಿನಲ್ಲಿ ಇಂದು ಮಳೆಯಾಗಲಿದೆ, ಹಲವೆಡೆ ಒಣಹವೆ ಮುಂದುವರೆಯಲಿದ್ದು, ಮೇ 9ರ ಬಳಿಕ ಮಳೆ ಚುರುಕುಪಡೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಕಡಿಮೆಯಾದ ಮಳೆಯ ಅಬ್ಬರ, ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆ
ಮಳೆ
Image Credit source: PTI

Updated on: May 06, 2025 | 7:20 AM

ಬೆಂಗಳೂರು, ಮೇ 06: ಕರ್ನಾಟಕದಾದ್ಯಂತ ಮೇ 5ರಿಂದ ಮಳೆ(Rain) ಕಡಿಮೆಯಾಗಿದೆ. ಬೆಂಗಳೂರು ಸೇರಿ ಹಲವೆಡೆ ಮೋಡಕವಿದ ವಾತಾವರಣ ಮುಂದುವರೆದಿದ್ದು ಮೇ 9ರ ಬಳಿಕ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ಕೋಲಾರ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಬೆಳಗಾವಿ, ಧಾರವಾಡದಲ್ಲಿ ಒಣಹವೆ ಇರಲಿದೆ. ಸೋಮವಾರ ಪೊನ್ನಂಪೇಟೆಯಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ
ಬಿಸಿಲು, ಮಳೆ, ಉರಿ ಸೆಕೆ: ಬೆಂಗಳೂರಿನ ವಾತಾವರಣಕ್ಕೆ ಜನ ಕಂಗಾಲು!
ಬೆಂಗಳೂರು ಸೇರಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ
ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ: ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮೇ 11ರವರೆಗೂ ಮಳೆ

ಹೊನ್ನಾವರದಲ್ಲಿ 34.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 36.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 40.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 am, Tue, 6 May 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us