Karnataka Rains: ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮೋಡಕವಿದ ವಾತಾವರಣವಿದ್ದು, ಚಳಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಜನವರಿ 14 ರಿಂದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Karnataka Rains: ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Jan 12, 2025 | 8:16 AM

ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ, ಒಣಹವೆ ಮುಂದುವರೆಯಲಿದೆ.

ಧಾರವಾಡದಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳದ ಆಗ್ನೇಯ ಮತ್ತು ನೈಋತ್ಯ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀವರೆಗೆ ವಿಸ್ತರಿಸಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ

ಎಚ್​ಎಎಲ್​ನಲ್ಲಿ25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 13 ರಿಂದ 19ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
ದೃಷ್ಟಿ ಗಣಪತಿ ಕುರಿತಾಗಿ ಶಾಸ್ತ್ರಗಳಲ್ಲಿ ಉಲ್ಲೇಖವಿದೆಯೇ? ಇಲ್ಲಿದೆ ಉತ್ತರ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Daily Horoscope: ರವಿವಾರದಂದು ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?