ಬೆಂಗಳೂರು ಸೇರಿ ಕರ್ನಾಟಕದ 11 ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ವಿಜಯನಗರ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಚಳಿ, ಒಣಹವೆ ಮುಂದುವರೆಯಲಿದೆ.
ಧಾರವಾಡದಲ್ಲಿ 14.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳದ ಆಗ್ನೇಯ ಮತ್ತು ನೈಋತ್ಯ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಇದ್ದು, ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀವರೆಗೆ ವಿಸ್ತರಿಸಿದೆ.
ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದ್ದು, ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ
ಎಚ್ಎಎಲ್ನಲ್ಲಿ25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 37.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ