Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ

ಚಂಡಮಾರುತದ ಪರಿಣಾಮ ಕರ್ನಾಟಕದ ಹಲವೆಡೆ ಮಲೆಯಾಗುತ್ತಿದೆ. ಹೀಗಾಗಿ ಬಿಸಿಲ ಬೇಗೆಯಿಂದ ಸ್ವಲ್ಪ ಮುಕ್ತಿ ಸಿಕ್ಕಂತಾಗಿದೆ. ಆದರೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ
ಮಳೆ
Image Credit source: PTI

Updated on: Apr 15, 2025 | 7:24 AM

ಬೆಂಗಳೂರು, ಏಪ್ರಿಲ್ 15: ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಸಾಧಾರಣ ಮಳೆ(Rain)ಯಾಗುತ್ತಿದೆ. ಸೋಮವಾರವೂ ಬನಶಂಕರಿ, ಜೆಪಿನಗರ, ಮೆಜೆಸ್ಟಿಕ್ ಸೇರಿ ಹಲವೆಡೆ ಮಳೆಯಾಗಿದೆ. ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಮುಂದುವರೆಯಲಿದೆ. ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಶಿಗ್ಗಾಂವ್, ನಾಪೋಕ್ಲು, ತಿಪಟೂರು, ಬೆಂಗಳೂರಿನಲ್ಲಿ ಮಳೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕೊಪ್ಪಳ ಮತ್ತು ಹಾವೇರಿಯಲ್ಲಿ ತಾಪಮಾನ ಹೆಚ್ಚಿತ್ತು. ಎಚ್​ಎಎಲ್​ನಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಗಾಳಿಯು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ.

ಇದನ್ನೂ ಓದಿ
ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!
ಕರ್ನಾಟಕದ ಕರಾವಳಿಯ ಎಲ್ಲಾ ಜಿಲ್ಲೆಗಳು ಸೇರಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಹೆಚ್ಚಳ; ಹವಾಮಾನ ಇಲಾಖೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯ ಮುನ್ಸೂಚನೆ

ಹೊನ್ನಾವರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ38.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us