Karnataka Rains: ಮತ್ತೊಂದು ಚಂಡಮಾರುತ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಶುರು

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಂಡಿದ್ದು ಜನರು ಭಯ ಬೀತರಾಗಿದ್ದಾರೆ. ಇದರ ಪರಿಣಾಮ ತಮಿಳುನಾಡು ಹಾಗೂ ಕರ್ನಾಟಕದ ಮೇಲಾಗಲಿದ್ದು ಈಗಾಗಲೇ ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ತುಂತುರು ಮಳೆ ಶುರುವಾಗಿದೆ, ಮೋಡಕವಿದ ವಾತಾವರಣವಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಮತ್ತೊಂದು ಚಂಡಮಾರುತ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ  ಮಳೆ ಶುರು
ಮಳೆ Image Credit source: PTI
Follow us
ನಯನಾ ರಾಜೀವ್
|

Updated on: Dec 12, 2024 | 7:20 AM

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ, ಡಿಸೆಂಬರ್ 18ರವರೆಗೂ ಮಳೆ ಮುಂದುವರೆಯಲಿರುವ ಸಾಧ್ಯತೆ ಇದೆ. ಕಳೆದ ಒಂದು ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಲಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮ ಈಗಾಗಲೇ ಬೆಂಗಳೂರಿನ ಮೇಲೆ ಗೋಚರಿಸಲಾರಂಭಿಸಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.

ಬೀದರ್​ನಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rains: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ