Karnataka Weather: ಈ ವಾರಾಂತ್ಯ ಬೆಂಗಳೂರಿನಲ್ಲಿ ಧಾರಾಕಾರ ಮಳೆ, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ

ಬೆಂಗಳೂರು, ಸೆಪ್ಟೆಂಬರ್ 19: ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ(Rain)ಯಾಗುತ್ತಿದೆ. ಗುರುವಾರ ಸಂಜೆ ಶುರುವಾದ ಮಳೆ ಶುಕ್ರವಾರವೂ ನಿಂತಿಲ್ಲ. ಈ ವಾರಾಂತ್ಯದಲ್ಲಿ ಮಳೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ,ವಿಜಯಪುರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ಯಡ್ರಾಮಿ, ಕೆಂಭಾವಿ, ಕಕ್ಕೇರಿ, ಗುಬ್ಬಿ, ಯಲಹಂಕ, ಸಿದ್ದಾಪುರ, ಮುದಗಲ್, ಕೆರೂರು, ಬೆಳ್ತಂಗಡಿಯಲ್ಲಿ ಭಾರಿ ಮಳೆಯಾಗಿದೆ. ಕಾರ್ಕಳ, ಹುಣಸಗಿ, ಆಲಮಟ್ಟಿ, ಚಿಂತಾಮಣಿ, ಸಿಂದಗಿ, ಮಧುಗಿರಿ, ಜೇವರ್ಗಿ, ಬಿಳಗಿ, ಭಾಲ್ಕಿ, ಬೆಂಗಳೂರು ಕೆಐಎಎಲ್, ವಿಜಯಪುರ, ಥೊಂಡೇಭಾವಿ, ಸೈದಾಪುರ, ರಬಕವಿ, ಮದ್ದೂರು, ಕೋಲಾಪುರ, ಕುಷ್ಟಗಿ, ಇಳಕಲ್, ಹುನಗುಂದ, ಹುಮ್ನಾಬಾದ್, ಗೋಪಾಲನಗರ, ಕ್ಯಾಸಲ್ರಾಕ್ನಲ್ಲಿ ಮಳೆಯಾಗಿದೆ.
ಮತ್ತಷ್ಟು ಓದಿ: Karnataka Rains: ಬೆಂಗಳೂರು ಸೇರಿ ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ 3 ದಿನ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್
ಆನವಟ್ಟಿ, ಝಲ್ಕಿ, ನಾರಾಯಣಪುರ, ಮಾಗಡಿ, ಎಂಎಂ ಹಿಲ್ಸ್, ಕೂಡಲಸಂಗಮ, ಹೊಸಕೋಟೆ, ಗಾಣಗಾಪುರ, ಧರ್ಮಸ್ಥಳ, ಔರಾದ್, ತಾಳಿಕೋಟೆ, ಟಿಜಿಹಳ್ಳಿ, ಶಾಹಪುರ, ಮೂಡುಬಿದಿರೆ, ಸಿರಾ, ಶೋರಾಪುರ, ಮುದ್ದೇಬಿಹಾಳ, ಮಂಕಿ, ಕೊಟ್ಟಿಗೆಹಾರ, ಕಿಬ್ಬನಹಳ್ಳಿ, ಹಾವೇರಿ, ಹೆಸರಘಟ್ಟ, ಹಾವೇರಿ, ಬನವಾಸಿ, ಚಿಕ್ಕಬಳ್ಳಾಪುರ, ದೇವರಹಿಪ್ಪರಗಿ, ಅಂಕೋಲಾದಲ್ಲಿ ಮಳೆಯಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿ ಏರ್ಪೋರ್ಟ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.




