Karnataka Weather: ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆ

|

Updated on: Dec 08, 2023 | 7:33 AM

ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

Karnataka Weather: ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆ
ಮಳೆ
Image Credit source: The Weather Channel
Follow us on

ಬೆಂಗಳೂರಿನಲ್ಲಿ ಡಿಸೆಂಬರ್ 9 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಚಿಂತಾಮಣಿಯಲ್ಲಿ ಮಳೆಯಾಗಿದೆ.

ವಿಜಯಪುರದಲ್ಲಿ 16.1 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ.

ಎಚ್​ಎಎಲ್​ನಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಹವಾಮಾನ ವರದಿ: ಡಿಸೆಂಬರ್ 9 ರಿಂದ ನಾಲ್ಕು ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಚೆನ್ನೈನಲ್ಲಿ ಭಾರಿ ಅವಾಂತರ ಸೃಷ್ಟಿಸಿದ್ದ ಮಿಚಾಂಗ್ ಚಂಡಮಾರುತದ ಅಬ್ಬರ ಈಗ ಆಂಧ್ರದಲ್ಲೂ ಶುರುವಾಗಿದೆ.ರಸ್ತೆಗಳು ಮಾತ್ರವಲ್ಲದೇ ಕೆಲ ಊರುಗಳೂ ಜಲಾವೃತವಾಗಿವೆ. ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ತಿರುಮಲ ತಿರುಪತಿ ಜಲಮಯವಾಗಿದ್ದು, ಜಲಪಾತಗಳಿಗೆ ಜೀವಕಳೆ ಪಡೆದಿವೆ. ಆಂಧ್ರ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಒಡಿಶಾ ಕೂಡ ಅಲರ್ಟ್ ಆಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ