AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಚುಮುಚುಮು ಚಳಿ, ಬೆಚ್ಚನೆಯ ಬಿಸಿಲು, ಆಹ್ಲಾದಕರ ವಾತಾವರಣ

ಮುಂಜಾವಿನಲ್ಲಿ ಮಂಜಿನ ಹೊದಿಕೆ, ಚುಮುಚುಮು ಚಳಿ, ಎಳೆ ಬಿಸಿಲು ಒಟ್ಟಿನಲ್ಲಿ ಈಗ ವಾತಾವರಣ ಆಹ್ಲಾದಕರವಾಗಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಚಳಿ ಇದೆ. ಬೀದರ್​ನಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ಕರ್ನಾಟಕದಾದ್ಯಂತ ಚುಮುಚುಮು ಚಳಿ, ಬೆಚ್ಚನೆಯ ಬಿಸಿಲು, ಆಹ್ಲಾದಕರ ವಾತಾವರಣ
ಚಳಿImage Credit source: PTI
ನಯನಾ ರಾಜೀವ್
|

Updated on: Jan 22, 2025 | 7:22 AM

Share

ಕರ್ನಾಟಕದಾದ್ಯಂತ ಮತ್ತೆ ಚಳಿಯ ಅನುಭವವಾಗುತ್ತಿದೆ. ಚಂಡಮಾರುತದಿಂದಾಗಿ ಒಂದೊಂದು ದಿನ ಒಂದೊಂದು ಬಗೆಯ ವಾತಾವರಣವಿರುತ್ತಿತ್ತು. ಇದೀಗ ಜನವರಿ 20ರಿಂದಲೇ ಹವಾಮಾನದಲ್ಲಿ ಮತ್ತೆ ಬದಲಾವಣೆ ಕಂಡುಬಂದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಚಳಿ ಇದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಚಳಿ ಇದೆ.

ಬೀದರ್​ನಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಹವಾಮಾನದಲ್ಲಿ ಹೆಚ್ಚಿನ ಬದಲಾವಣೆಗಳೇನೂ ಇಲ್ಲ. ಎಚ್​ಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಮೈಕೊರೆವ ಚಳಿ, ಬೀದರ್​ನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ

ಹೊನ್ನಾವರದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ