Karnataka Weather: ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ, ಡಿ.19ರಿಂದ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗುತ್ತಿದ್ದಂತೆ ಮೈಕೊರೆವ ಚಳಿ ಶುರುವಾಗಿದೆ, ದಟ್ಟ ಮಂಜು ಕವಿದಿದೆ. ಹಾಗೆಯೇ ಡಿಸೆಂಬರ್ 19ರ ಬಳಿಕ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ ಮೊದಲ ವಾರದಿಂದಲೇ ಆರಂಭವಾಗಬೇಕಿದ್ದ ಚಳಿ ಈಗ ಶುರುವಾಗಿದೆ, ಒಂದೊಮ್ಮೆ ಮತ್ತೆ ಮಳೆ ಶುರುವಾದರೆ ಚಳಿಯ ಪ್ರಮಾಣ ಕಡಿಮೆಯಾಗಿ ಬೆಳೆಗಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿದೆ.ಚಾಮರಾಜನಗರದಲ್ಲಿ ಮಳೆಯಾಗಿದೆ, ಬಿಜಾಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂವಿದೆ.

Karnataka Weather: ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ, ಡಿ.19ರಿಂದ ಮಳೆ ಸಾಧ್ಯತೆ
ಚಳಿImage Credit source: PTI
Follow us
ನಯನಾ ರಾಜೀವ್
|

Updated on: Dec 15, 2024 | 7:52 AM

ಬೆಂಗಳೂರಿನಲ್ಲಿ ಮಳೆ ಕಡಿಮೆಯಾಗುತ್ತಿದ್ದಂತೆ ಮೈಕೊರೆವ ಚಳಿ ಶುರುವಾಗಿದೆ, ದಟ್ಟ ಮಂಜು ಕವಿದಿದೆ. ಹಾಗೆಯೇ ಡಿಸೆಂಬರ್ 19ರ ಬಳಿಕ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ ಮೊದಲ ವಾರದಿಂದಲೇ ಆರಂಭವಾಗಬೇಕಿದ್ದ ಚಳಿ ಈಗ ಶುರುವಾಗಿದೆ, ಒಂದೊಮ್ಮೆ ಮತ್ತೆ ಮಳೆ ಶುರುವಾದರೆ ಚಳಿಯ ಪ್ರಮಾಣ ಕಡಿಮೆಯಾಗಿ ಬೆಳೆಗಳಿಗೆ ತೊಂದರೆಯಾಗುವ ಸಾಧ್ಯತೆ ಹೆಚ್ಚಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಸಧ್ಯ ಒಣಹವೆ ಇರಲಿದ್ದು, ಐದು ದಿನಗಳ ಬಳಿಕ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರದಲ್ಲಿ ಮಳೆಯಾಗಿದೆ, ಬಿಜಾಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 24.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ ಇಂದು ಮಳೆ

ಹೊನ್ನಾವರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ
Daily Horoscope: ಈ ರಾಶಿಯವರಿಗೆ ಏಳು ಗ್ರಹಗಳ ಶುಭಫಲವಿದೆ
45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
45 ವರ್ಷಗಳ ನಂತರ ತೆರೆದ ಸಂಭಾಲ್‌ನ ದೇವಾಲಯ; ವಿಡಿಯೋ ವೈರಲ್
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
ಭಾರತವನ್ನು ವಿಶ್ವವು ಪ್ರಜಾಪ್ರಭುತ್ವದ ತಾಯಿಯೆಂದು ಆದರಿಸುತ್ತದೆ: ಪ್ರಧಾನಿ
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ