Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕರ್ನಾಟಕದ ಹಲವೆಡೆ ಬೆಳಗಿನ ಜಾವ ಚಳಿ ಕಾಣಿಸಿಕೊಳ್ಳುತ್ತಿದೆ. ಕರಾವಳಿಯಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗುವ ಸಾಧ್ಯತೆ ಇದೆ, ಎಲ್ಲೆಡೆ ಒಣಹವೆ ಮುಂದುವರೆಯಲಿದೆ.

Karnataka Weather: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳ ಸಾಧ್ಯತೆ
ಬೇಸಿಗೆImage Credit source: The Pioneer Woman
Follow us
ನಯನಾ ರಾಜೀವ್
|

Updated on: Feb 29, 2024 | 7:49 AM

ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗುತ್ತಿದೆ.

ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 17.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕ ಬಹುತೇಕ ಕಡೆ ಚಳಿ, ಒಣಹವೆ ಮುಂದುವರಿಕೆ

ಬಾಗಲಕೋಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆ ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ, ಮಾರ್ಚ್ 1 ರಿಂದ ಮಾರ್ಚ್ 3 ರವರೆಗೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಬಲವಾದ ಗಾಳಿ ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮಾರ್ಚ್ 1 ರಂದು ಹಳದಿ ಅಲರ್ಟ್ ಮತ್ತು ಮಾರ್ಚ್ 2 ರಂದು ಆರೆಂಜ್ ಅಲರ್ಟ್ ಘೋಷಿಸಿದೆ. ಹಿಸಾರ್-0.9 ಮಿ.ಮೀ ಝಜ್ಜರ್-0.5 ಮಿ.ಮೀ ಮಳೆಯಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್