ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಬೆಳಗಾವಿ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಗರಿಷ್ಠ ತಾಪಮಾನ ಹೆಚ್ಚಳವಾಗುತ್ತಿದೆ.
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದೆ. ಮೇಲ್ಮೈ ಮಾರುತಗಳು ಕೆಲವೊಮ್ಮೆ ಪ್ರಬಲವಾಗುವ ಸಾಧ್ಯತೆ ಇದೆ.
ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 17.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕ ಬಹುತೇಕ ಕಡೆ ಚಳಿ, ಒಣಹವೆ ಮುಂದುವರಿಕೆ
ಬಾಗಲಕೋಟೆಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಸಹಿತ ಮಳೆ
ಉತ್ತರ ಪ್ರದೇಶದಲ್ಲಿ ಆಲಿಕಲ್ಲು ಮಳೆಯಾಗಿದೆ, ಮಾರ್ಚ್ 1 ರಿಂದ ಮಾರ್ಚ್ 3 ರವರೆಗೆ ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಬಲವಾದ ಗಾಳಿ ಮತ್ತು ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆಯು ಮಾರ್ಚ್ 1 ರಂದು ಹಳದಿ ಅಲರ್ಟ್ ಮತ್ತು ಮಾರ್ಚ್ 2 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಹಿಸಾರ್-0.9 ಮಿ.ಮೀ
ಝಜ್ಜರ್-0.5 ಮಿ.ಮೀ ಮಳೆಯಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ