Karnataka Weather: ಮುಂದಿನ ಒಂದು ವಾರ ಕರ್ನಾಟಕದ ಕರಾವಳಿಯಲ್ಲಿ ಉಷ್ಣ ಅಲೆ
ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಕರಾವಳಿಯಲ್ಲಿ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಶಾಖ ಹೆಚ್ಚಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಕರಾವಳಿಯಲ್ಲಿ ಉಷ್ಣಅಲೆ ಬೀಸಲಿದ್ದು, ಬಿಸಿಲ ಝಳ ವಿಪರೀತ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಕೂಡ ಶಾಖ ಹೆಚ್ಚಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.
ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣಾಂಶ ಹೆಚ್ಚಿರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ವಾತಾವರಣದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ.
ಹೆಚ್ಚಿನ ತಾಪಮಾನ, ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದರಿಂದ ಶಾಖ ಅಲೆಯು ಹೆಚ್ಚಿನ ಪರಿಣಾಮವನ್ನುಂಟು ಮಾಡುತ್ತದೆ. ಶಿಶುಗಳು, ದುರ್ಬಲರು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರು ಹೆಚ್ಚಿನ ಆರೋಗ್ಯ ಕಾಳಜಿವಹಿಸಬೇಕು ಎಂದು ಸಲಹೆ ನೀಡಿದೆ.
ಹಾಗೆಯೇ ಮಧ್ಯಾಹ್ನ 12 ರಿಂದ 3ಗಂಟೆಯವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು, ಬಾಯಾರಿಕೆ ಇಲ್ಲದಿದ್ದರೂ ಕೂಡ ಸಾಕಷ್ಟು ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ , ಸಡಿಲವಾದ ಬಟ್ಟೆ ಧರಿಸಬೇಕು, ತಲೆಗೆ ಬಿಸಿಲ ಶಾಖ ತಾಕದಂತೆ ನೋಡಿಕೊಳ್ಳಿ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ. ನಿಮ್ಮನ್ನು ಹೈಡ್ರೇಟ್ ಆಗಿರಿಸಿಕೊಳ್ಳಲು ಒಆರ್ಎಸ್ ಅಥವಾ ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಅಕ್ಕಿ ನೀರು, ನಿಂಬೆ ನೀರು ಇತ್ಯಾದಿಗಳನ್ನು ಕುಡಿಯಿರಿ ಎಂದು ಹವಾಮಾನ ಇಲಾಖೆ ಹೇಳಿದೆ.
ಕಾರವಾರ, ಪಣಂಬೂರು, ಮಂಗಳೂರು, ಬಾಗಲಕೋಟೆ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿ, ಮಡಿಕೇರಿ, ಶಿವಮೊಗ್ಗ, ಮೈಸೂರು, ಮಂಡ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗಿದೆ. ಚಾಮರಾಜನಗರದಲ್ಲಿ 13.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಕಾರವಾರದಲ್ಲಿ 38.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ