Karnataka Weather: ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ

|

Updated on: Apr 23, 2024 | 7:23 AM

ಇಂದು ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ, ಉತ್ತರ ಒಳನಾಡಿನ ಕೆಲವೆಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಉತ್ತರ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಸಾಧ್ಯತೆ
ಮಳೆ
Follow us on

ಇಂದು ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರಿನಲ್ಲಿ ಮಳೆಯಾಗಲಿದೆ.

ಬೆಳಗಾವಿ, ಹಾವೇರಿಯಲ್ಲಿ ಸೋಮವಾರ ಮಳೆಯಾಗಿದೆ. ರಾಯಚೂರಿನಲ್ಲಿ 41.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್​ಎಎಲ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 27.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Rain: ಮುಂದಿನ 3 ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

ಬೆಳಗಾವಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 37.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 38.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ