AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮುಂಗಾರು ಅಬ್ಬರ

ಕರ್ನಾಟಕದಲ್ಲಿ ಮುಂಗಾರು ಆರ್ಭಟ ಇಂದಿನಿಂದ ಜೋರಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Karnataka Rains: ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹೆಚ್ಚಲಿದೆ ಮುಂಗಾರು ಅಬ್ಬರ
ಮಳೆImage Credit source: The Weather Channel
ನಯನಾ ರಾಜೀವ್
|

Updated on:Jun 19, 2024 | 7:47 AM

Share

ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಜೂನ್​ 22ರಿಂದ ಕರಾವಳಿ ಜಿಲ್ಲೆಗಳು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದ್ದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕೊಟ್ಟಿಗೆಹಾರ, ಧರ್ಮಸ್ಥಳ, ಕಾರ್ಕಳ, ಕಕ್ಕೇರಿ, ಯುಗಟಿ, ಮಂಗಳೂರು, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಮಾಣಿ, ಬೆಳ್ತಂಗಡಿ, ಹೊನ್ನಾವರ, ಭಾಗಮಂಡಲ, ಮುಲ್ಕಿ, ಕುಶಾಲನಗರ, ಕುಮಟಾ, ಪಣಂಬೂರು, ಪರಶುರಾಂಪುರ, ತೊಂಡೇಭಾವಿಯಲ್ಲಿ ಮಳೆಯಾಗಿದೆ.

ಇಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಜೂನ್​ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು, ಈ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೀದರ್​ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರಗಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:39 am, Wed, 19 June 24

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?