ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ವರುಣನ ಆರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಹೆಚ್ಚು ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 22ರಿಂದ ಕರಾವಳಿ ಜಿಲ್ಲೆಗಳು, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಟ್ಟಿಗೆಹಾರ, ಧರ್ಮಸ್ಥಳ, ಕಾರ್ಕಳ, ಕಕ್ಕೇರಿ, ಯುಗಟಿ, ಮಂಗಳೂರು, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಮಾಣಿ, ಬೆಳ್ತಂಗಡಿ, ಹೊನ್ನಾವರ, ಭಾಗಮಂಡಲ, ಮುಲ್ಕಿ, ಕುಶಾಲನಗರ, ಕುಮಟಾ, ಪಣಂಬೂರು, ಪರಶುರಾಂಪುರ, ತೊಂಡೇಭಾವಿಯಲ್ಲಿ ಮಳೆಯಾಗಿದೆ.
ಇಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದಲ್ಲಿ ಜೂನ್ 21ರ ಬಳಿಕ ಚುರುಕುಗೊಳ್ಳಲಿದೆ ಮುಂಗಾರು, ಈ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಹವಾಮಾನಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬೀದರ್ನಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 35.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:39 am, Wed, 19 June 24