ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಕಡಿಮೆಯಾಯ್ತು ಚಳಿ, ಮೋಡಕವಿದ ವಾತಾವರಣ, 7 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ ಸೇರಿದಂತೆ 7 ಜಿಲ್ಲೆಗಳು ಮತ್ತು ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬಾಗಲಕೋಟೆ, ಬೀದರ್ ಸೇರಿ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ವಿವಿಧ ನಗರಗಳ ಕನಿಷ್ಠ ಮತ್ತು ಗರಿಷ್ಠ ಉಷ್ಣಾಂಶದ ವಿವರವನ್ನೂ ನೀಡಲಾಗಿದೆ.

ಬೆಂಗಳೂರು, ಜನವರಿ 13: ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ(Cyclone) ರೂಪುಗೊಳ್ಳುತ್ತಿದ್ದು ಕರ್ನಾಟಕದ ಅಲ್ಲಲ್ಲಿ ಮಳೆಯಾಗುತ್ತಿದೆ. ಹೀಗಾಗಿ ಚಳಿಯೂ ಕಡಿಮೆಯಾಗಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ.
ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗದಲ್ಲಿ ಒಣಹವೆ ಇರಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಬೀದರ್ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 23.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: ಕರ್ನಾಟಕ ಹವಾಮಾನ ವರದಿ: ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಬೆಂಗಳೂರು ಸೇರಿ ಹಲವೆಡೆ ಇಂದು ತುಂತುರು ಮಳೆ
ಬೆಳಗಾವಿ ಏರ್ಪೋರ್ಟ್ನಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಬೀದರ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಧ್ಯಪ್ರದೇಶ ಮತ್ತು ನಾಸಿಕ್ ವರೆಗೆ ಹಾಗೂ ರಾಯಗಢ, ರತ್ನಗಿರಿ, ಸಿಂಧುದುರ್ಗ, ಸತಾರಾ, ಸಾಂಗ್ಲಿ, ಕೊಲ್ಹಾಪುರ ಮತ್ತು ಸೋಲಾಪುರ ಸೇರಿದಂತೆ ಮುಂಬೈನ ದಕ್ಷಿಣ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಮರಾಠವಾಡ ಪ್ರದೇಶದ ಜಲ್ನಾ, ಹಿಂಗೋಲಿ ಮತ್ತು ಬೀಡ್‌ನಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಮಹಾರಾಷ್ಟ್ರದ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಹಾಗೂ ಕೇರಳ, ತಮಿಳುನಾಡು, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಒಣಹವೆ ಇರಲಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
