Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ, ಉಳಿದೆಡೆ ಒಣಹವೆ

ಕರ್ನಾಟಕದ ಉತ್ತರ ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಚಳಿ ಇದ್ದು, ಉಳಿದೆಡೆ ಒಣಹವೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಚಳಿ ಕಾಣಿಸಿಕೊಂಡರೂ ರಾತ್ರಿ ಬೆಚ್ಚನೆಯ ತಾಪಮಾನ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಚಳಿ, ಉಳಿದೆಡೆ ಒಣಹವೆ
Image Credit source: Karnataka.com

Updated on: Jan 23, 2024 | 7:32 AM

ಕರ್ನಾಟಕದ ಉತ್ತರ ಹಾಗೂ ಕರಾವಳಿಯ ಕೆಲವು ಭಾಗಗಳಲ್ಲಿ ಚಳಿ ಇದ್ದು, ಉಳಿದೆಡೆ ಒಣಹವೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಚಳಿ ಕಾಣಿಸಿಕೊಂಡರೂ ರಾತ್ರಿ ಬೆಚ್ಚನೆಯ ತಾಪಮಾನ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಇರಲಿದೆ.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ 13.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.

ರಾಜ್ಯಾದ್ಯಂತ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್​, ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್​ ಇರಲಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಕೆಲವೆಡೆ ಗರಿಷ್ಠ ತಾಪಮಾನ ಹೆಚ್ಚಳ, ಉತ್ತರ ಒಳನಾಡಿನಲ್ಲಿ ಅಧಿಕ ಚಳಿ

ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32. ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಪ್ಪಳದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನದಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮೈಸೂರಿನಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ. ಶಿವಮೊಗ್ಗದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us