Karnataka Weather: ಬೆಂಗಳೂರಿನಲ್ಲಿ ಶೀತಗಾಳಿ, ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದಲೇ ಶೀತಗಾಳಿ ಶುರುವಾಗಿದೆ, ಮೈಕೊರೆಯುವ ಚಳಿ ಕೂಡ ಇದೆ. ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.

Karnataka Weather: ಬೆಂಗಳೂರಿನಲ್ಲಿ ಶೀತಗಾಳಿ, ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು
ಹವಾಮಾನ
Image Credit source: Business Standard

Updated on: Jan 29, 2024 | 7:34 AM

ಬೆಂಗಳೂರಿನಲ್ಲಿ ಭಾನುವಾರ ರಾತ್ರಿಯಿಂದಲೇ ಶೀತಗಾಳಿ ಶುರುವಾಗಿದೆ, ಮೈಕೊರೆಯುವ ಚಳಿ ಕೂಡ ಇದೆ. ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, 29 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 34.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 31.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರಲ್ಲಿ ಮೋಡಕವಿದ ವಾತಾವರಣ, ಚಾಮರಾಜನಗರದಲ್ಲಿ ಭಾರಿ ಚಳಿ

ಧಾರವಾಡದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಾಮರಾಜನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಮಗಳೂರಿನಲ್ಲಿ 28.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 32.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us