ಕರ್ನಾಟಕದಲ್ಲಿ ಚಳಿ ಮುಂದುವರೆದಿದೆ. ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಚಳಿ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೆಯೇ ಉತ್ತರ ಕನ್ನಡದಲ್ಲಿ ಕನಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಲಿದೆ, ಬೀದರ್, ಗುಲ್ಬರ್ಗಾ ಮತ್ತು ಗದಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆ ಇದೆ.
ರಾಯಚೂರು, ಗದಗದಲ್ಲಿ ಸಾಮಾನ್ಯಕ್ಕಿಂತ 3-5 ಡಿಗ್ರಿ ಸೆಲ್ಸಿಯಸ್ ಕಡಿಮೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಮಂಡ್ಯಮ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 2-4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆ ಇರುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ 11.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನ ಎಚ್ಎಎಲ್ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ, ಒಣಹವೆ
ಬೀದರ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ