Karnataka Weather: ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು, ಕರ್ನಾಟಕದಾದ್ಯಂತ ಚಳಿ ಚಳಿ

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ, ಉತ್ತರ ಒಳನಾಡಿನ ಬಹುತೇಕ ಕಡೆ ಕನಿಷ್ಠ ಉಷ್ಣಾಂಶದಲ್ಲಿ ಹೆಚ್ಚಳ ಕಂಡುಬಂದಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Weather: ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು, ಕರ್ನಾಟಕದಾದ್ಯಂತ ಚಳಿ ಚಳಿ
ಚಳಿImage Credit source: PTI
Follow us
ನಯನಾ ರಾಜೀವ್
|

Updated on: Jan 06, 2025 | 7:42 AM

ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಚಳಿ ಶುರುವಾಗಿದೆ. ಕಳೆದ ಒಂದು ವಾರದಿಂದ ಕನಿಷ್ಠ ಉಷ್ಣಾಂಶ ಹೆಚ್ಚಾಗುತ್ತಿದೆ. ವಿಜಯಪುರದಲ್ಲಿ 10.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಚಳಿ ಹೆಚ್ಚಾಗಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಚಳಿ ಹೆಚ್ಚಾಗಿದೆ.

ಬೆಂಗಳೂರಿನ ಎಚ್​ಎಎಲ್​ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ, ಒಣಹವೆ

ಹೊನ್ನಾವರದಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್, ಪಣಂಬೂರಿನಲ್ಲಿ 34.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.6 ಡಿಗ್ರಿ ಸೆಲ್ಸಿಸಯ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಂಗಳೂರಿನಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮುಂದಿನ ಐದು ದಿನಗಳ ಕಾಲ ನಗರದಲ್ಲಿ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ 26-27ರಿಂದ ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ. ಶುಷ್ಕ ವಾತಾವರಣವಿರಲಿದ್ದು, ಬೆಳಗ್ಗೆ, ರಾತ್ರಿ ಮಂಜು ಕವಿದ ವಾತಾವರಣವಿರಲಿದೆ, ಸದ್ಯ ನಗರದಲ್ಲಿ ಮಳೆಯ ವಾತಾವರಣ, ಹವಾಮಾನ ವೈಪರಿತ್ಯಗಳ ಲಕ್ಷಗಣಗಳು ಗೋಚರಿಸುತ್ತಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ