Karnataka Weather: ವಿಜಯಪುರ, ಬೀದರ್​ನಲ್ಲಿ ಚಳಿಯೋ ಚಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಹೆಚ್ಚಳ ಸಾಧ್ಯತೆ

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ ಒಂದು ವಾರ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತುಂಬಾ ಚಳಿ ಇರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲೂ ಚಳಿ ಸಾಧಾರಣವಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿ, ಒಣಹವೆ ಮುಂದುವರೆಯಲಿದೆ.

Karnataka Weather: ವಿಜಯಪುರ, ಬೀದರ್​ನಲ್ಲಿ ಚಳಿಯೋ ಚಳಿ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಹೆಚ್ಚಳ ಸಾಧ್ಯತೆ
ಚಳಿ
Image Credit source: PTI

Updated on: Jan 24, 2025 | 7:02 AM

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮುಂದಿನ ಒಂದು ವಾರ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ತುಂಬಾ ಚಳಿ ಇರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲೂ ಚಳಿ ಸಾಧಾರಣವಾಗಿರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿಯೂ ಚಳಿ, ಒಣಹವೆ ಮುಂದುವರೆಯಲಿದೆ.

ವಿಜಯಪುರ ಹಾಗೂ ಬೀದರ್​ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅರಬ್ಬಿ ಸಮುದ್ರದಲ್ಲಿ ಸೈಕ್ಲೋನ್ ಪರಿಚಲನೆ ಉಂಟಾಗಿದ್ದು, ಮತ್ತೆ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣವಿದೆ, ಎಚ್​ಎಎಲ್​ನಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ29.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಒಂದು ವಾರ ವಿಪರೀತ ಚಳಿ, ಧಾರವಾಡದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲು

ಹೊನ್ನಾವರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:59 am, Fri, 24 January 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us