Karnataka Weather: ಕರ್ನಾಟಕದ ಐದು ಜಿಲ್ಲೆಗಳಲ್ಲಿ ಶೀತ ಗಾಳಿ, ಕೆಲವೆಡೆ ಡಿ.20ರಿಂದ ಮಳೆ

ಉತ್ತರ ಕರ್ನಾಟಕದ ಕೆಲವೆಡೆ ಶೀತ ಗಾಳಿ ಜೋರಾಗಿದೆ, ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಚಳಿಯ ಪ್ರಮಾಣ ಕಡಿಮೆಯಾಗಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್​, ಬಾಗಲಕೋಟೆಯಲ್ಲಿ ಚಳಿ ಹೆಚ್ಚಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದ ಐದು ಜಿಲ್ಲೆಗಳಲ್ಲಿ ಶೀತ ಗಾಳಿ, ಕೆಲವೆಡೆ ಡಿ.20ರಿಂದ ಮಳೆ
ಚಳಿImage Credit source: PTI
Follow us
ನಯನಾ ರಾಜೀವ್
|

Updated on: Dec 18, 2024 | 7:33 AM

ಉತ್ತರ ಕರ್ನಾಟಕದ ಕೆಲವೆಡೆ ಶೀತ ಗಾಳಿ ಜೋರಾಗಿದೆ, ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಚಳಿಯ ಪ್ರಮಾಣ ಕಡಿಮೆಯಾಗಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್​, ಬಾಗಲಕೋಟೆಯಲ್ಲಿ ಚಳಿ ಹೆಚ್ಚಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 8.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ, ಬೆಂಗಳೂರಿನ ಎಚ್​ಎಎಲ್​ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ, ಡಿ.19ರಿಂದ ಮಳೆ ಸಾಧ್ಯತೆ

ಬೀದರ್​ನಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ., ಬಾಗಲಕೋಟೆಯಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ಜಾರಕಿಹೊಳಿ ಮತ್ತು ಬಸನಗೌಡ ಯತ್ನಾಳ್ ಹೇಳಿಕೆಗಳಲ್ಲಿ ವ್ಯತ್ಯಾಸ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ವಿಜಯೇಂದ್ರರನ್ನು ಟೀಕಿಸುವುದು ಬಿಡದ ಯತ್ನಾಳ್, ಪುನಃ ಟೀಕಾಪ್ರಹಾರ!
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸಿದ ರಜತ್-ಉಗ್ರಂ ಮಂಜು
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ
ಜಮೀರ್ ಭೇಟಿಯಾದ ಯತ್ನಾಳ್: ಭೇಟಿ ಹಿಂದಿನ ಉದ್ದೇಶ ಬಹಿರಂಗಪಡಿಸಿದ ಶಾಸಕ
ಪವಿತ್ರಾ ಬದುಕಲ್ಲಿ ನಾನಿಲ್ಲ, ನನ್ನ ಬದುಕಲ್ಲಿ ಅವರಿದ್ದಾರೆ: ಸಂಜಯ ಸಿಂಗ್
ಪವಿತ್ರಾ ಬದುಕಲ್ಲಿ ನಾನಿಲ್ಲ, ನನ್ನ ಬದುಕಲ್ಲಿ ಅವರಿದ್ದಾರೆ: ಸಂಜಯ ಸಿಂಗ್