ಉತ್ತರ ಕರ್ನಾಟಕದ ಕೆಲವೆಡೆ ಶೀತ ಗಾಳಿ ಜೋರಾಗಿದೆ, ಡಿಸೆಂಬರ್ 20ರಿಂದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಚಳಿಯ ಪ್ರಮಾಣ ಕಡಿಮೆಯಾಗಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆಯಲ್ಲಿ ಚಳಿ ಹೆಚ್ಚಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರದಲ್ಲಿ ಮಳೆಯಾಗಲಿದೆ.
ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗದಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 8.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ, ಬೆಂಗಳೂರಿನ ಎಚ್ಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ, ಡಿ.19ರಿಂದ ಮಳೆ ಸಾಧ್ಯತೆ
ಬೀದರ್ನಲ್ಲಿ 27.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 8.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ., ಬಾಗಲಕೋಟೆಯಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ