Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆ ಸಾಧ್ಯತೆ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಿನದಿಂದ ದಿನಕ್ಕೆ ಇಳಿಯುತ್ತಿದೆ. ಬೆಂಗಳೂರಿನಲ್ಲೂ ಬೆಳಿಗ್ಗೆಯಿಂದಲೇ ಮೋಡ ಹಾಗೂ ಮಂಜಿನ ವಾತಾವರಣ ಕಂಡು ಬಂದಿದೆ. ಕಳೆದ ಮೂರು ತಿಂಗಳಿಂದ ಕರ್ನಾಟಕದಲ್ಲಿ ಧಾರಾಕಾರ ಮಳೆ ಸುರಿದು ಕೆರೆ-ಕಟ್ಟೆಗಳು, ನದಿಗಳು, ಪ್ರಮುಖ ಜಲಾಶಯಗಳು ಭರ್ತಿಯಾಗಿವೆ. ಸದ್ಯ ರಾಜ್ಯದಲ್ಲಿ ಶೀತಗಾಳಿ ಕೂಡ ಬೀಸುತ್ತಿದ್ದು, ಸಂಜೆಯಿಂದಲೇ ಚುಮುಚುಮು ಚಳಿ ಕಾಡುತ್ತಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗುತ್ತಿದ್ದು, ಮುಂದಿನ 2 ದಿನಗಳಲ್ಲಿ ಬೀದರ್, ವಿಜಯಪುರ, ಧಾರವಾಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆಯಾಗಿಲ್ಲ. ನಂತರದ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ.
ಮುಂದಿನ ಎರಡು ದಿನಗಳಲ್ಲಿ ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ಉತ್ತರ ಒಳನಾಡಿನಲ್ಲಿ ವಿಪರೀತ ಚಳಿ, ಕರಾವಳಿ, ಮಲೆನಾಡಿನಲ್ಲಿ ಹವಾಮಾನ ಹೇಗಿದೆ?
ವಿಜಯಪುರದಲ್ಲಿ 10.9 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಾರವಾರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರಿನಲ್ಲಿ 31.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ