Karnataka Weather: ಬೆಂಗಳೂರು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಚಳಿಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ಮೂರು ದಿನಗಳ ಕಾಲ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕೆಲವೆಡೆ ಮೋಡಕವಿದ ವಾತಾವರಣವಿದೆ, ಇನ್ನೂ ಕೆಲವೆಡೆ ಚಳಿ ಇದೆ, ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Weather: ಬೆಂಗಳೂರು ಸೇರಿ ಕರ್ನಾಟಕದ 5 ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆ ಸಾಧ್ಯತೆ
ಚಳಿImage Credit source: PTI
Follow us
ನಯನಾ ರಾಜೀವ್
|

Updated on: Dec 21, 2024 | 7:33 AM

ಕರ್ನಾಟಕದ ಕೆಲವೆಡೆ ಮೋಡಕವಿದ ವಾತಾವರಣವಿದೆ, ಇನ್ನೂ ಕೆಲವೆಡೆ ಚಳಿ ಇದೆ, ಬೆಂಗಳೂರು ಸೇರಿ ಐದು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಿದೆ. ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಡಿಸೆಂಬರ್ 24ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ.

ವಿಜಯಪುರದಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ ಹೆಚ್ಚಳ, ಡಿ.24 ರಂದು 6 ಜಿಲ್ಲೆಗಳಲ್ಲಿ ಮಳೆ

ಬೀದರ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಇನ್ಮುಂದೆ ಬೆಂಗಳೂರು ಟ್ರಾಫಿಕ್​ ಬಗ್ಗೆ ಮೊಬೈಲ್​ನಲ್ಲೇ ತಿಳಿಯಿರಿ: ವಿಡಿಯೋ
ಮಂಜಣ್ಣನ ಮಟನ್ ಪ್ರೀತಿಗೆ ಮನೆಯವರಿಂದ ವಿರೋಧ
ಮಂಜಣ್ಣನ ಮಟನ್ ಪ್ರೀತಿಗೆ ಮನೆಯವರಿಂದ ವಿರೋಧ
ಒಬ್ಬ ಭಯೋತ್ಪಾದಕನ ಹಾಗೆ ರವಿಯವರನ್ನು ನಡೆಸಿಕೊಂಡಿದ್ದಾರೆ: ವಿಜಯೇಂದ್ರ
ಒಬ್ಬ ಭಯೋತ್ಪಾದಕನ ಹಾಗೆ ರವಿಯವರನ್ನು ನಡೆಸಿಕೊಂಡಿದ್ದಾರೆ: ವಿಜಯೇಂದ್ರ
ಬಿಡುಗಡೆ ಬಳಿಕ ಸಿಟಿ ರವಿ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
ಬಿಡುಗಡೆ ಬಳಿಕ ಸಿಟಿ ರವಿ ಮಹತ್ವದ ಸುದ್ದಿಗೋಷ್ಠಿಯ ನೇರಪ್ರಸಾರ
ಮೀರತ್‌ನಲ್ಲಿ ಪ್ರದೀಪ್ ಮಿಶ್ರಾ ಕಥಾ ಕಾರ್ಯಕ್ರಮದಲ್ಲಿ ಕಾಲ್ತುಳಿತ
ಮೀರತ್‌ನಲ್ಲಿ ಪ್ರದೀಪ್ ಮಿಶ್ರಾ ಕಥಾ ಕಾರ್ಯಕ್ರಮದಲ್ಲಿ ಕಾಲ್ತುಳಿತ
ರವಿಯವರ ಚಿಕ್ಕಮಗಳೂರು ಮನೆಬಳಿ ಕಾರ್ಯಕರ್ತರ ಸಂಭ್ರಮಾಚರಣೆ 
ರವಿಯವರ ಚಿಕ್ಕಮಗಳೂರು ಮನೆಬಳಿ ಕಾರ್ಯಕರ್ತರ ಸಂಭ್ರಮಾಚರಣೆ 
ಪಾಯಿಂಟ್ ಬ್ಲ್ಯಾಂಕ್ ರೇಂಜಲ್ಲಿ ಶೂಟ್ ಮಾಡುವಂತೆ ಹೇಳಿದ್ದು ನಿಜ: ಪ್ರಸಾದ್
ಪಾಯಿಂಟ್ ಬ್ಲ್ಯಾಂಕ್ ರೇಂಜಲ್ಲಿ ಶೂಟ್ ಮಾಡುವಂತೆ ಹೇಳಿದ್ದು ನಿಜ: ಪ್ರಸಾದ್
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಸಿಟಿ ರವಿ ಪ್ರಕರಣ ವಿಚಾರಣೆ ಆರಂಭ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ಬಸ್​ನೊಳಗೆ ಕಿರುಕುಳ ನೀಡಿದ ಕುಡುಕನಿಗೆ 26 ಬಾರಿ ಕೆನ್ನೆಗೆ ಬಾರಿಸಿದ ಮಹಿಳೆ
ರವಿ ಮನೆಯಲ್ಲಿ ಪ್ರಾಣೇಶ್ ಜೊತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು
ರವಿ ಮನೆಯಲ್ಲಿ ಪ್ರಾಣೇಶ್ ಜೊತೆ ಹಿಂದೂ ಸಂಘಟನೆಗಳ ಕಾರ್ಯಕರ್ತರು