Karnataka Weather: ಬೆಂಗಳೂರು ಸೇರಿ ಹಲವೆಡೆ ಹೆಚ್ಚಿದ ಚಳಿ, ಕರಾವಳಿ ಭಾಗದಲ್ಲಿ ಸಾಧಾರಣ ಮಳೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Karnataka Weather: ಬೆಂಗಳೂರು ಸೇರಿ ಹಲವೆಡೆ ಹೆಚ್ಚಿದ ಚಳಿ, ಕರಾವಳಿ ಭಾಗದಲ್ಲಿ ಸಾಧಾರಣ ಮಳೆ
ಚಳಿ
Image Credit source: Hindustan Times

Updated on: Dec 19, 2023 | 7:44 AM

ಬೆಂಗಳೂರು, ಡಿ.19: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಕೂಲ್ ಕೂಲ್ ವಾತಾವರಣ ಮುಂದುವರಿಯಲಿದೆ (Bengaluru Weather). ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ (Karnataka Weather).

ಮುಂದಿನ 48 ಘಂಟೆಗಳು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ. ಕರಾವಳಿಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಹ ಆಗಲಿದೆ. ಇನ್ನು ಮಲೆನಾಡು ಭಾಗದಲ್ಲಿ ಎರಡು ದಿನದಿಂದ ಚಳಿಯ ಪ್ರಮಾಣ ಹೆಚ್ಚಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು, ಮೈಸೂರು ಭಾಗದಲ್ಲೂ ಗರಿಷ್ಠ ಉಷ್ಣಾಂಶದಲ್ಲಿ ಏರಿಳಿತ ಕಂಡು ಬಂದಿದ್ದು, ಚಳಿಯ ಅನುಭವ ಹೆಚ್ಚಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರ ಹಾಗೂ ಮಂಗಳೂರಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ.

ಇದನ್ನೂ ಓದಿ: Tamil Nadu Rains: ಭಾರೀ ಮಳೆಗೆ ತತ್ತರಿಸಿದ ತಮಿಳುನಾಡು: ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ

ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 24 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೋಮವಾರ ವಿಜಯಪುರದಲ್ಲಿ 17.2 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶವಿತ್ತು. ಈಗ ಅಲ್ಲಿ ಏರಿಕೆ ಕಂಡು ಬರುತ್ತಿದೆ. ಬೀದರ್‌, ದಾವಣಗೆರೆಯಲ್ಲೂ ಒಂದೆರಡು ಬಾರಿ ಕನಿಷ್ಠ ಉಷ್ಣಾಂಶದ ವಾತಾವರಣ ಇತ್ತು. ಆನಂತರ ಏರಿಕೆ ಕಂಡು ಬಂದಿತು. ಸೋಮವಾರದಂದು ಬೀದರ್‌ನಲ್ಲಿ 16 ಡಿಗ್ರಿ ಸೆಲ್ಸಿಯಸ್‌ ಹಾಗೂ ದಾವಣಗೆರೆಯಲ್ಲಿ 17 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ