Karnataka Weather: ಕರ್ನಾಟಕದಾದ್ಯಂತ ಶೀತ ಗಾಳಿ, ಮಂಜು ಮುಸುಕಿದ ವಾತಾವರಣ

ಕರ್ನಾಟಕದಾದ್ಯಂತ ಮಂಜು ಮುಸುಕಿದ ವಾತಾವರಣವಿದ್ದು, ಸೂರ್ಯ ಸ್ವಲ್ಪ ತಡವಾಗಿ ಗೋಚರಿಸುತ್ತಿದ್ದಾನೆ. ಬೆಂಗಳೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಶುಭ್ರ ಆಕಾಶವಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಒಣಹವೆ ಇರಲಿದೆ..ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ .

Karnataka Weather: ಕರ್ನಾಟಕದಾದ್ಯಂತ ಶೀತ ಗಾಳಿ, ಮಂಜು ಮುಸುಕಿದ ವಾತಾವರಣ
ಚಳಿ
Image Credit source: PTI

Updated on: Dec 30, 2024 | 7:34 AM

ಮುಂಗಾರು, ಚಂಡಮಾರುತದಿಂದಾಗಿ ಕರ್ನಾಟಕದ್ಯಂತ ಡಿಸೆಂಬರ್ 20ರವರೆಗೂ ಆಗಾಗ ಮಳೆಯಾಗುತ್ತಲೇ ಇತ್ತು. ಇದೀಗ ಶೀತ ಗಾಳಿ ಶುರುವಾಗಿದ್ದು ಚಳಿಗಾಲದ ಅನುಭವವಾಗತೊಡಗಿದೆ. ಜನವರಿ ಮೊದಲ ವಾರದವರೆಗೂ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲೂ ಚಳಿಯ ವಾತಾವರಣವಿರಲಿದೆ.

ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಒಣಹವೆ ಇರಲಿದೆ. ವಿಜಯಪುರದಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್​ಎಎಲ್​ನಲ್ಲಿ 26.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ, ಒಣಹವೆ

ಬೀದರ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ .

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 am, Mon, 30 December 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us