AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 14ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆೇಂಗಳೂರು ನಗರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆ
ಮಳೆImage Credit source: Scroll.in
ನಯನಾ ರಾಜೀವ್
|

Updated on: Jan 10, 2025 | 7:48 AM

Share

ಕರ್ನಾಟಕದಲ್ಲಿ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಸಂಕ್ರಾಂತಿಯಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಕೊಡಗು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಲೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಹೆಚ್ಚಿನ ಬದಲಾವಣೆ ಇಲ್ಲ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದ್ದು, ಚಳಿ ಇರಲಿದೆ. ಬೀದರ್​ನಲ್ಲಿ 10.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಎಚ್​ಎಎಲ್​ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಚಳಿ ಪ್ರಮಾಣ ಹೆಚ್ಚಳ ಸಾಧ್ಯತೆ, ಒಣಹವೆ

ಹೊನ್ನಾವರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 26.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 10.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಶಂಕರ್ ನಾಗ್ ಮಗಳು ಚಿತ್ರರಂಗಕ್ಕೇಕೆ ಬಂದಿಲ್ಲ? ಉತ್ತರಿಸಿದ ಅನಂತ್ ನಾಗ್
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ ರೇಣುಕಾಚಾರ್ಯ
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪಾಕಿಸ್ತಾನಿ ಉಗ್ರರೊಂದಿಗೆ ಸಂಪರ್ಕ ಆರೋಪ: ಏಳು ಜನರ ವಿರುದ್ಧ FIR
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಪೈಪ್‌ಲೈನ್ ಒಡೆದು ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ಇಂದು ಈ ರಾಶಿಯವರು ಬೇಜವಾಬ್ದಾರಿತನದಿಂದ ದೂರವಿರಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ