AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದಾದ್ಯಂತ ಚುಮು ಚುಮು ಚಳಿ ನಡುವೆಯೇ ವರುಣನ ಆಗಮನ ಸಾಧ್ಯತೆ

ಪ್ರತಿ ವರ್ಷದಂತೆ ಅಲ್ಲದಿದ್ದರೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಚಳಿ ಶುರುವಾಗಿದೆ. ಹಲವು ಕಡೆಗಳಲ್ಲಿ ಮಂಜು ಮುಸುಕಿದ ವಾತಾವರಣವೂ ಇದೆ. ಹೊಸ ವರ್ಷದ ಮೊದಲ ವಾರದಲ್ಲೇ ವರುಣದೇವನ ಆಗಮನವಾಗುವ ಹೆಚ್ಚಿನ ಸಾಧ್ಯತೆ ಇದೆ. ಜನವರಿ 4 ರಿಂದ 7ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಚುಮು ಚುಮು ಚಳಿ ನಡುವೆಯೇ ವರುಣನ ಆಗಮನ ಸಾಧ್ಯತೆ
ಮಳೆImage Credit source: Scroll.in
Follow us
ನಯನಾ ರಾಜೀವ್
|

Updated on: Jan 01, 2024 | 7:41 AM

ಪ್ರತಿ ವರ್ಷದಂತೆ ಅಲ್ಲದಿದ್ದರೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಚಳಿ ಶುರುವಾಗಿದೆ. ಹಲವು ಕಡೆಗಳಲ್ಲಿ ಮಂಜು ಮುಸುಕಿದ ವಾತಾವರಣವೂ ಇದೆ. ಹೊಸ ವರ್ಷದ ಮೊದಲ ವಾರದಲ್ಲೇ ವರುಣದೇವನ ಆಗಮನವಾಗುವ ಹೆಚ್ಚಿನ ಸಾಧ್ಯತೆ ಇದೆ. ಜನವರಿ 4 ರಿಂದ 7ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಈಗ ಶುಭ್ರ ಆಕಾಶವಿದೆ, ಬೆಳಗಿನ ಜಾವ ಮೈಕೊರೆವ ಚಳಿ ಜತೆಗೆ ಕೆಲವೆಡೆ ಮಂಜು ಮುಸುಕಿದ ವಾತಾವರಣವೂ ಇತ್ತು. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6ರವರೆಗೆ ಮಳೆ

ಎಲ್ಲೆಲ್ಲಿ ಹವಾಮಾನ ಹೇಗಿದೆ? ಬೆಂಗಳೂರು: 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು: 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗ: 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ಮೈಸೂರು: 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಡ್ಯ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಡಿಕೇರಿ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಮನಗರ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನ: 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಾಮರಾಜನಗರ: 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಬಳ್ಳಾಪುರ: 27ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,16 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್