Karnataka Weather: ಕರ್ನಾಟಕದಾದ್ಯಂತ ಚುಮು ಚುಮು ಚಳಿ ನಡುವೆಯೇ ವರುಣನ ಆಗಮನ ಸಾಧ್ಯತೆ

ಪ್ರತಿ ವರ್ಷದಂತೆ ಅಲ್ಲದಿದ್ದರೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಚಳಿ ಶುರುವಾಗಿದೆ. ಹಲವು ಕಡೆಗಳಲ್ಲಿ ಮಂಜು ಮುಸುಕಿದ ವಾತಾವರಣವೂ ಇದೆ. ಹೊಸ ವರ್ಷದ ಮೊದಲ ವಾರದಲ್ಲೇ ವರುಣದೇವನ ಆಗಮನವಾಗುವ ಹೆಚ್ಚಿನ ಸಾಧ್ಯತೆ ಇದೆ. ಜನವರಿ 4 ರಿಂದ 7ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಚುಮು ಚುಮು ಚಳಿ ನಡುವೆಯೇ ವರುಣನ ಆಗಮನ ಸಾಧ್ಯತೆ
ಮಳೆ
Image Credit source: Scroll.in

Updated on: Jan 01, 2024 | 7:41 AM

ಪ್ರತಿ ವರ್ಷದಂತೆ ಅಲ್ಲದಿದ್ದರೂ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಚಳಿ ಶುರುವಾಗಿದೆ. ಹಲವು ಕಡೆಗಳಲ್ಲಿ ಮಂಜು ಮುಸುಕಿದ ವಾತಾವರಣವೂ ಇದೆ. ಹೊಸ ವರ್ಷದ ಮೊದಲ ವಾರದಲ್ಲೇ ವರುಣದೇವನ ಆಗಮನವಾಗುವ ಹೆಚ್ಚಿನ ಸಾಧ್ಯತೆ ಇದೆ. ಜನವರಿ 4 ರಿಂದ 7ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಈಗ ಶುಭ್ರ ಆಕಾಶವಿದೆ, ಬೆಳಗಿನ ಜಾವ ಮೈಕೊರೆವ ಚಳಿ ಜತೆಗೆ ಕೆಲವೆಡೆ ಮಂಜು ಮುಸುಕಿದ ವಾತಾವರಣವೂ ಇತ್ತು. ಎಚ್​ಎಎಲ್​ನಲ್ಲಿ 28.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜನವರಿ 4 ರಿಂದ 6ರವರೆಗೆ ಮಳೆ

ಎಲ್ಲೆಲ್ಲಿ ಹವಾಮಾನ ಹೇಗಿದೆ?
ಬೆಂಗಳೂರು: 27 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು: 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿವಮೊಗ್ಗ: 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಳಗಾವಿ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ. ಮೈಸೂರು: 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮಂಡ್ಯ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಡಿಕೇರಿ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಮನಗರ: 29ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾಸನ: 28 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಾಮರಾಜನಗರ: 31ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿಕ್ಕಬಳ್ಳಾಪುರ: 27ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ,16 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us