AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮುಂದಿನ ಒಂದು ವಾರ ಮಳೆ

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಚಳಿ ವಿಪರೀತವಾಗಿತ್ತು, ಭಾನುವಾರ ಅಲ್ಲಲ್ಲಿ ಕೊಂಚ ಮಳೆಯಾಗಿರುವ ಪರಿಣಾಮ ಚಳಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಇಂದು ಸಂಜೆ ಕೂಡ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಆಗೊಮ್ಮೆ ಈಗೊಮ್ಮೆ ಕೊಂಚ ಮಳೆಯಾಗಲಿದೆ, ವಿಜಯಪುರ, ಧಾರವಾಡ, ಬೆಳಗಾವಿಯಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ರಾಯಲ್ಪಾಡುವಿನಲ್ಲಿ ಭಾನುವಾರ ಮಳೆಯಾಗಿದೆ.

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮುಂದಿನ ಒಂದು ವಾರ ಮಳೆ
ಮಳೆImage Credit source: PTI
ನಯನಾ ರಾಜೀವ್
|

Updated on: Dec 01, 2025 | 7:42 AM

Share

ಬೆಂಗಳೂರು, ಡಿಸೆಂಬರ್ 1: ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿ ಬಹುತೇಕ ಕಡೆಗಳಲ್ಲಿ ಮುಂದಿನ ಒಂದು ವಾರ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಡಿಸೆಂಬರ್ 5ರ ಬಳಿಕ ಮಳೆಯಾಗಲಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಆಗೊಮ್ಮೆ ಈಗೊಮ್ಮೆ ಕೊಂಚ ಮಳೆಯಾಗಲಿದೆ, ವಿಜಯಪುರ, ಧಾರವಾಡ, ಬೆಳಗಾವಿಯಲ್ಲಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ರಾಯಲ್ಪಾಡುವಿನಲ್ಲಿ ಭಾನುವಾರ ಮಳೆಯಾಗಿದೆ.

ವಿಜಯಪುರ ಹಾಗೂ ಧಾರವಾಡದಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಉತ್ತರ ಒಳನಾಡಿನಲ್ಲಿ ಕನಿಷ್ಠ ಉಷ್ಣಾಂಶ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ. ಎಚ್​ಎಎಲ್​ನಲ್ಲಿ 21.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 21.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 23.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ತುಂತುರು ಮಳೆ, ಚಳಿಯೋ ಚಳಿ, ರಾಜ್ಯಾದ್ಯಂತ ಹೇಗಿದೆ ವಾತಾವರಣ?

ಹೊನ್ನಾವರದಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 30.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿ ಏರ್​ಪೋರ್ಟ್​ನಲ್ಲಿ 25.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 12.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಅಪಾರ್ಟ್​ಮೆಂಟ್​ ಲಿಫ್ಟ್​ನೊಳಗೆ ಬಲೂನ್​ಗಳ ಸ್ಫೋಟ; ಕಂಗಾಲಾದ ನಿವಾಸಿಗಳು
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ಸಾಯಿ ಕುಮಾರ್ ಎದುರು ನಿಂತು ಸೈಲೆಂಟ್ ಆದ ಹೊಸ ಹೀರೋ; ಆಮೇಲೆ ಏನಾಯ್ತು?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಸಿಟಿ ರವಿ ಅಮಾನತು: ಬಂದರೆ ಹೊರಗೆ ನಿಲ್ಲಿಸಿ ಎಂದು ಸಭಾಪತಿ ಖಡಕ್ ಸೂಚನೆ
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ