Karnataka Weather: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಭಾರಿ ಮಳೆ ಮುನ್ಸೂಚನೆ, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Bangalore Weather: ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದಿಂದಾಗಿ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದಿಂದಾಗಿ ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ. ಕರ್ನಾಟಕದಲ್ಲಿ ಡಿಸೆಂಬರ್ 9ರಿಂದ 12ರವರೆಗೆ ಭಾರಿ ಮಳೆಯಾಗಲಿದೆ. ಡಿಸೆಂಬರ್ 8 ರಂದು ಬೆಂಗಳೂರು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಮಳೆಯಾಗಲಿದೆ.
ಡಿಸೆಂಬರ್ 9 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಮತ್ತಷ್ಟು ಓದಿ: Mandous Cyclone: ತಮಿಳುನಾಡಿನಲ್ಲಿ ‘ಮ್ಯಾಂಡಸ್’ ಸದ್ದು: ಡಿ.8 ರಂದು ಅಪ್ಪಳಿಸಲಿರುವ ಚಂಡಮಾರುತಕ್ಕೆ NDRF ಸನ್ನದ್ಧ
ಡಿಸೆಂಬರ್ 17 ರಂದು ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರಿನಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಕಡೆಗಳಲ್ಲಿ ಬೆಳಗವಿನ ಜಾವ ಮಂಜು ಕವಿದ ವಾತಾವರಣವಿರಲಿದೆ. ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬಾಗಲಕೋಟೆಯಲ್ಲಿ 9.6 ಡಿಗ್ರಿ ಸೆಲ್ಸಿಯಸ್ ಅತಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ತಮಿಳುನಾಡು, ಪುದುಚೇರಿಗೆ ಡಿಸೆಂಬರ್ 8 ರಂದು ಮ್ಯಾಂಡಸ್( Mandous) ಚಂಡಮಾರುತ( Cyclone) ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ, ಚಂಡಮಾರುತವು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳಲಿದ್ದು, ಚೆನ್ನೈನಿಂದ ಆಗ್ನೇಯಕ್ಕೆ ಸುಮಾರು 900 ಕಿ.ಮೀ. ಎನ್‌ಡಿಆರ್‌ಎಫ್ ತಂಡಗಳು, ಸೇನೆ, ನೌಕಾಪಡೆಯನ್ನು ಸಹ ಚಂಡಮಾರುತದ ಅಬ್ಬರ ನಿಯಂತ್ರಣಕ್ಕೆ ಸಜ್ಜುಗೊಳಿಸಲಾಗಿದೆ.
ಡಿಸೆಂಬರ್ 6 ರಂದು ರಾತ್ರಿ 11:30 ಗಂಟೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ, ಕಾರೈಕಲ್‌ನಿಂದ ಸುಮಾರು 840 ಕಿಮೀ ಪೂರ್ವ-ಆಗ್ನೇಯಕ್ಕೆ ಮತ್ತು ಚೆನ್ನೈನಿಂದ ಸುಮಾರು 900 ಕಿಮೀ ಆಗ್ನೇಯದಲ್ಲಿ ಡಿಪ್ರೆಷನ್ ಶುರುವಾಗಿದೆ ಎಂದು ಐಎಂಡಿ ತಿಳಿಸಿದೆ. ಇಂದು ಸಂಜೆ ವೇಳೆಗೆ ವಾಯುಭಾರ ಕುಸಿತವು ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆ ಇದೆ. ನಾಳೆ ಬೆಳಗಿನ ವೇಳೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ.
ಚಂಡಮಾರುತದ ಚಂಡಮಾರುತವನ್ನು ಮ್ಯಾಂಡಸ್ ಎಂದು ಹೆಸರಿಸಲಾಗಿದೆ. ಇದು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳು ಮತ್ತು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚಿನ ಭಾಗಗಳಲ್ಲಿ ಭಾರೀ ಮತ್ತು ಭಾರೀ ಮಳೆಯನ್ನು ತರುವ ನಿರೀಕ್ಷೆಯಿದೆ. ಮಳೆಯ ಜೊತೆಗೆ ಗುಡುಗು ಮತ್ತು ಮಿಂಚು ಸಹ ಇರಲಿದೆ ಎಂದು ಹೇಳಲಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ