Karnataka Weather: ದಾವಣಗೆರೆಯಲ್ಲಿ ಅತ್ಯಂತ ಕಡಿಮೆ ತಾಪಮಾನ, ಕಲಬುರಗಿಯಲ್ಲಿ ಅತಿ ಹೆಚ್ಚು ಉಷ್ಣಾಂಶ
ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಕೆಲವೆಡೆ ಚಳಿ ಮುಂದುವರೆದರೆ ಇನ್ನೂ ಕೆಲವೆಡೆ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ದಾವಣಗೆರೆಯಲ್ಲಿ 13.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಕರಾವಳಿಯ ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ, ಕಲಬುರಗಿ, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನದಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ.

ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹವಾಮಾನದಲ್ಲಿ ಸಾಕಷ್ಟು ಬದಲಾವಣೆಗಳು ಕಂಡುಬರುತ್ತಿವೆ. ಕೆಲವೆಡೆ ಚಳಿ ಮುಂದುವರೆದರೆ ಇನ್ನೂ ಕೆಲವೆಡೆ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ದಾವಣಗೆರೆಯಲ್ಲಿ 13.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಕರಾವಳಿಯ ಕಾರವಾರದಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ, ಕಲಬುರಗಿ, ಹಾಸನ, ಮೈಸೂರಿನಲ್ಲಿ ಗರಿಷ್ಠ ತಾಪಮಾನದಲ್ಲಿ ಭಾರಿ ಹೆಚ್ಚಳ ಕಂಡುಬಂದಿದೆ.
ಕಳೆದ 24 ಗಂಟೆಗಳಲ್ಲಿ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಗರಿಷ್ಠ ಉಷ್ಣಾಂಶ 4 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಿದೆ. ಕರಾವಳಿ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನ 33-36 ಡಿಗ್ರಿ ಸೆಲ್ಸಿಯಸ್, ಆಗುಂಬೆ, ಬೆಂಗಳೂರು, ಚಿಕ್ಕಮಗಳೂರು, ಹಾಸನ, ಚಿಂತಾಮಣಿ ಮತ್ತು ಮಡಿಕೇರಿಯಲ್ಲಿ 31-33 ಡಿಗ್ರಿ ಸೆಲ್ಸಿಯಸ್, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ 34-35 ಡಿಗ್ರಿ ಸೆಲ್ಸಿಯಸ್ ಇತ್ತು.
ಮತ್ತಷ್ಟು ಓದಿ: Karnataka Weather: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರ, ಕರ್ನಾಟಕದ ಹವಾಮಾನದಲ್ಲಿ ಬದಲಾವಣೆಯಾಗುತ್ತಾ?
ಬೆಂಗಳೂರಿನಲ್ಲಿ ಶುಭ್ರ ಆಕಾಶವಿದೆ, ಎಚ್ಎಎಲ್ನಲ್ಲಿ 32.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ